Sunday, October 1, 2023
spot_img
- Advertisement -spot_img

ರಾಹುಲ್‌ಗೆ ಲೋಕಸಭಾ ಸದಸ್ಯತ್ವ ಮರಳಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆ ಸದಸ್ಯತ್ವ ಮರಳಿ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಸದಸ್ಯತ್ವವನ್ನು ಮರುಸ್ಥಾಪಿಸಿರುವ ಕುರಿತು ಲೋಕಸಭೆಯ ಸಚಿವಾಲಯದ ಅಧಿಸೂಚನೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿದೆ.

ನ್ಯಾಯಾಲಯದ ಶಿಕ್ಷೆ ವಿಧಿಸಿದ ನಂತರ ಶಾಸಕರು ಒಮ್ಮೆ ತಮ್ಮ ಕಚೇರಿಯನ್ನು ಕಳೆದುಕೊಂಡರೆ, ಅವರು ಎಲ್ಲಾ ಆರೋಪಗಳಿಂದ ಖುಲಾಸೆಯಾಗುವರೆಗೂ ಸಂಸದರಾಗಿ ಮರಳಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಾಳೆ ಇಂಡೋನೇಷ್ಯಾಕ್ಕೆ ಪ್ರಧಾನಿ ಮೋದಿ ಪ್ರವಾಸ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು, ಇದು ಪ್ರಜಾಪ್ರತಿನಿಧಿ ಕಾಯಿದೆ, 1951ರ ಪ್ರಕಾರ ಸಂಸದೀಯ ಸ್ಥಾನದಿಂದ ಅನರ್ಹತೆಗೆ ಕಾರಣವಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ನಂತರ ಅವರ ದೋಷಾರೋಪಣೆಗೆ ತಡೆ ನೀಡಿತ್ತು. ಇದಾದ ಬಳಿಕ ಅವರಿಗೆ ರಾಜ್ಯಸಭಾ ಸದಸ್ಯತ್ವ ಮರಳಿ ನೀಡಲಾಗಿತ್ತು.

ಇದೀಗ ಅವರಿಗೆ ಮರಳಿ ನೀಡಲಾದ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಕೋರಿ ಲಕ್ನೋ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ, ಲೋಕಸಭೆ ಸ್ಪೀಕರ್ ರಾಹುಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿ ತೆಗೆದುಕೊಂಡ ನಿರ್ಧಾರ ಸರಿಯಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಎರಡು ಕಡೆ ಮತದಾನದ ಹಕ್ಕು ಆರೋಪ; ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿಗೆ ಕೋರ್ಟ್ ಸಮನ್ಸ್!

ಸೂರತ್‌ ಸ್ಥಳೀಯ ನ್ಯಾಯಾಲಯವು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಮೋದಿ ಉಪನಾಮದ ಕುರಿತು ಮಾಡಿದ ಹೇಳಿಕೆಗಾಗಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿತ್ತು. ಆದರೆ ಈ ಪ್ರಕರಣ ಸಂಬಂಧ ರಾಹುಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ಶಿಕ್ಷೆಯಿಂದ ವಿನಾಯಿತಿ ನೀಡಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles