ಬಾಗಲಕೋಟೆ: ರೈತ ಮುಖಂಡ ಯಲ್ಲಪ್ಪ ಹೆಗಡೆ ಎಂಬುವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಅವರು ನೀಡಿರುವ ದೂರು ಆಧರಿಸಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಇಂದು ಇಂಗಳಗಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದು, ನಿರಾಣಿ ಸಹೋದರರ ಆರು ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಮದರಸಾಗಳಲ್ಲಿ ಇನ್ಮುಂದೆ ಕನ್ನಡ-ಇಂಗ್ಲೀಷ್ ಶಿಕ್ಷಣ: ಸಚಿವ ಜಮೀರ್
ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಹನುಮಂತ ಶಿಂಧೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.