Wednesday, November 29, 2023
spot_img
- Advertisement -spot_img

‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಎಫ್‌ಐಆರ್‌ ದಾಖಲು

ಬೆಂಗಳೂರು : ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್‌.ಎಂ.ರಮೇಶ್‌ಗೌಡ ನೀಡಿದ ದೂರಿನ ಮೇರೆಗೆ ಬಿಂದು, ನವೀನ್‌ಗೌಡ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ನವೆಂಬರ್‌ 14ರಂದು 10 ಗಂಟೆಗೆ ರಾತ್ರಿ ಆಟೋದಲ್ಲಿ ಬಂದ ಅಪರಿಚಿತರು ಜೆಡಿಎಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೇ ಭದ್ರತಾ ಸಿಬ್ಬಂದಿ ಪ್ರಶ್ನಿಸಿದ್ದಕ್ಕೆ ಮಹಾದೇವ್‌ ರುವಾನಿ ಯವರನ್ನು ನಿಂದಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ಧಾರೆ. ಜೊತೆಗೆ ನವೀನ್‌ಗೌಡ ಹಾಗೂ ಬಿಂದು ಸಾಮಾಜಿಕ ಜಾಲತಾಣದಲ್ಲೂ ಕೀಳು ರೀತಿಯಲ್ಲಿ ಪೋಸ್ಟ್‌ ಹರಿಯಬಿಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ನಮ್ಮ ಪ್ರಣಾಳಿಕೆಗಳನ್ನು ಬಿಜೆಪಿ ಕಾಪಿ ಮಾಡ್ತಿದೆ: ಶಾಮನೂರು ಶಿವಶಂಕರಪ್ಪ

ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಲಾಗಿತ್ತು. ವಿದ್ಯುತ್ ಕಳವು ಆರೋಪದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಜೊತೆಗೆ ಜೆಪಿ ಭವನದ ಕಾಪೌಂಡ್ ಗೋಡೆಗೆ ಕರೆಂಟ್ ಕಳ್ಳ ಕುಮಾರಸ್ವಾಮಿ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್ ಅಂಟಿಸಲಾಗಿತ್ತು.

ಕುಮಾರಸ್ವಾಮಿ ಕರೆಂಟ್ 200 ಯುನಿಟ್ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್ ಕದ್ದರೂ ಹೆಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ. ಈ ನಡುವೆ ಪೋಸ್ಟರ್ ಕುರಿತು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಪೊಲೀಸರು ಪೋಸ್ಟರ್‌ ಗಳನ್ನು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ : ಒಂದೇ ದಿನದಲ್ಲಿ 21,000 ಕ್ಕೂ ಹೆಚ್ಚು ಜನ ಬಿಜೆಪಿ ಸೇರ್ಪಡೆ..!

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles