ಬೆಂಗಳೂರು : ಕನ್ನಡದ ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿ ಸೇರಲಿದ್ದಾರೆ. ಬಿಜೆಪಿ ಆಫೀಸ್ನಲ್ಲಿ ಸಂಜೆ 4.20ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಕಮಲ ಪಾಳಯಕ್ಕೆ ಸೇರಿಕೊಳ್ಳಲಿದ್ದಾರೆ.
ಶಾಸಕ, ಪರಿಷತ್ ಸದಸ್ಯರಾಗಿ ರಾಜಕೀಯ ಅನುಭವ ಇರುವಂತಹ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕ, ಸಚಿವ ಮುನಿರತ್ನ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿ ಇರಲಿದ್ದಾರೆ.
ಅನಂತ್ ನಾಗ್ 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಅಂದಹಾಗೆ 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ನಟ ಅನಂತ್ ನಾಗ್ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ? ಟಿಕೆಟ್ ಸಿಗುತ್ತಾ? ಇತ್ಯಾದಿ ವಿಚಾರಗಳ ಬಗ್ಗೆ ಅವರ ಅಭಿಮಾನಿಗಳಲ್ಲಿಯೂ ಕುತೂಹಲ ಹೆಚ್ಚಾಗಿದೆ.