Monday, December 11, 2023
spot_img
- Advertisement -spot_img

ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು : ಅಂಗನವಾಡಿಗಳಿಗೆ ಪರ್ಯಾಯವಾಗಿ ಶಿಶು ಪಾಲನಾ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಮುಂದಾಗಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ನಾಳೆ (ಸೆ.15) ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನಿರ್ಧರಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಫೆಡರೇಷನ್ ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ನಾಳೆ ರಾಜ್ಯದ ಎಲ್ಲಾ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಬೆಂಗಳೂರು ಆಸುಪಾಸಿನ ಜಿಲ್ಲೆಗಳಿಂದ ಒಂದು ಸಾವಿರಕ್ಕಿಂತ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇದನ್ನೂ ಓದಿ : ಕಾವೇರಿ ನೀರು ವಿಚಾರ : ಮಂಡ್ಯ ರೈತ ಹಿತರಕ್ಷಣಾ ಸಮಿತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ

ಶಿಶು ಪಾಲನಾ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದರ ಹಿಂದೆ ಅಂಗನವಾಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ಅಡಗಿದೆ ಎಂದು ಜಯಮ್ಮ ಆರೋಪಿಸಿದರು.

ಪತ್ರಿಕಾ ಪ್ರಕಟಣೆ

ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಸಹಾಯಕಿಯರಿಗೆ 10 ಸಾವಿರ ರೂ. ನೀಡುವ ಭರವಸೆಯನ್ನು ಈಡೇರಿಸಬೇಕು. ಅಂಗನವಾಡಿಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎರಡು ತಿಂಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles