Thursday, June 8, 2023
spot_img
- Advertisement -spot_img

ನನ್ನ ನಡೆಯೇ ನನಗೆ ಮುಳ್ಳಾಯಿತು : ಸಚಿವ ಅಂಗಾರ

ಬೆಂಗಳೂರು: ನಾನು ಪಕ್ಷ, ಪಕ್ಷದ ನಾಯಕರನ್ನು ದೂರುವುದಿಲ್ಲ. ನನ್ನ ನಡೆಯೇ ನನಗೆ ಮುಳ್ಳಾಯಿತು. ಇಲ್ಲಿಗೆ ರಾಜಕೀಯ ಸಾಕು ಎಂದು ಸಚಿವ ಎಸ್.ಅಂಗಾರ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದ ಅಂಗಾರ ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದರು. 7 ಬಾರಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಂಗಾರ, ಮೊದಲ ಬಾರಿಗೆ ಸೋಲನ್ನು ಅನುಭವಿಸಿದ್ದರು. ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ರೀತಿ,ಸಂಸ್ಕಾರ ಇದಲ್ಲ, ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

Related Articles

- Advertisement -spot_img

Latest Articles