ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಪತ್ನಿ ಅನಿತಾ ಕುಮಾರಸ್ವಾಮಿ, ಹೆಚ್‌ಡಿಕೆ ಅವರು ಆರೋಗ್ಯವಾಗಿಯೇ ಇದ್ದಾರೆ. ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದರು.
ಇಂದು ಬೆಳಗ್ಗಿನ ಜಾವ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಅವರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ ಎಂದರು.
ವೈದ್ಯರು ನಾಳೆಯೇ ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದರು. ಆದರೆ, ಪತಿ ಕುಮಾರಸ್ವಾಮಿ ಅವರು ಮನೆಗೆ ಬಂದರೆ ವಿಶ್ರಾಂತಿ ಪಡೆಯುವುದಿಲ್ಲ. ಹಾಗಾಗಿ ಇನ್ನೆರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಶುಕ್ರವಾರ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.
ಸುಳ್ಳುಸುದ್ದಿಗಳನ್ನು ನಂಬಬೇಡಿ: ಕುಮಾರಸ್ವಾಮಿ ಅವರ ಆರೋಗ್ಯದ ವಿಚಾರದಲ್ಲಿ ಯಾವುದೇ ಉಹಾಪೋಹದ ಸುದ್ದಿಗಳನ್ನು ರಾಜ್ಯದ ಜನ ದಯವಿಟ್ಟು ನಂಬಬೇಡಿ. ಅವರಿಗೆ ಯಾವುದೇ ತೊಂದರೆ ಇಲ್ಲ. ವದಂತಿಗಳಿಗೆ ಯಾರು ತಲೆಕೆಡಿಸಿಕೊಳ್ಳಬೇಡಿ ಎಂದು ಅನಿತಾ ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.