Wednesday, May 31, 2023
spot_img
- Advertisement -spot_img

ಮಾಜಿ ಸಚಿವ ಅಂಜನಮೂರ್ತಿ ಇನ್ನಿಲ್ಲ: ಸಿಎಂ ಬೊಮ್ಮಾಯಿ ಸಂತಾಪ

ನೆಲಮಂಗಲ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಅಂಜನಮೂರ್ತಿ ಇಂದು ಇಹಲೋಕ ತ್ಯಜಿಸಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಂಜನಮೂರ್ತಿ ನೆಲಮಂಗಲದಲ್ಲಿ ಮೂರು ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಮತ್ತು ವಸತಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಇವರ ಅಗಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ , ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನದಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾರ್ಗದರ್ಶಕನನ್ನು ನಾವು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖದಲ್ಲಿರುವ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನಗಳು. ಹಿರಿಯರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಟ್ವೀಟ್ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವ ಅಂಜನ ಮೂರ್ತಿ ನಿಧನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಮಾಜಿ ಸಚಿವರೂ ಆದ ಶ್ರೀ ಎಚ್.ಅಂಜನಾಮೂರ್ತಿ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Related Articles

- Advertisement -

Latest Articles