ಬೆಂಗಳೂರು: ಸಿದ್ದರಾಮಯ್ಯ ಅವರ ಸರ್ಕಾರ ಒಂದು ವರ್ಷದೊಳಗೆ ಪತನವಾಗಲಿದೆ ಎಂದು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, “ಕರ್ನಾಟಕ ಸರ್ಕಾರವು ಒಂದು ವರ್ಷದ ನಂತರ ಪತನವಾಗಲಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ 2024 ರೊಳಗೆ ಹೊಡೆದಾಡದಿದ್ದರೆ, ಇಬ್ಬರಿಗೂ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು. ಏಕೆಂದರೆ ಸರ್ಕಾರದ ರಚನೆಯೇ ದೋಷಪೂರಿತವಾಗಿದೆ ಎಂದು ಅಭಿಪ್ರಾಯಪಟ್ಟರು.
ಇಬ್ಬರೂ ನಾಯಕರು 2.5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಎಐಸಿಸಿ ತಲಾ 10 ಮಂತ್ರಿಗಳನ್ನು ಹೊಂದಿದ್ದಾರೆ, ಇದು ಯಾವ ರೀತಿಯ ಸರ್ಕಾರದ ರಚನೆ?’ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರಕಾರ ನೀಡಿದ ಭರವಸೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ನಂತರ ನೀಡಿದ ಘೋಷಣೆಗಳಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದರು.
ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿಗಳನ್ನು ಈಡೇರಿಸಲು ಸುಮಾರು 50 ಸಾವಿರ ಕೋಟಿ ರುಪಾಯಿ ಬೇಕಾಗಬಹುದು. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರುಪಾಯಿ ಬಾಕಿ ಬರಬೇಕಿದೆ. ರಾಜ್ಯದಿಂದ 4 ಲಕ್ಷ ಕೋಟಿ ರುಪಾಯಿ ತೆರಿಗೆ ಕಟ್ಟುತ್ತಿದ್ದೇವೆ. ರಾಜ್ಯದ ಬಜೆಟ್ ಗಾತ್ರ 3.10 ಲಕ್ಷ ಕೋಟಿ ರುಪಾಯಿ ಇದೆ. ನಮ್ಮ ರಾಜ್ಯದ ಬಗ್ಗೆ ಕೇಂದ್ರ ಮಲತಾಯಿ ಧೋರಣೆ ತೋರಿಸುತ್ತಿದೆ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯಕ್ಕೆ ಕಡಿಮೆ ಅನುದಾನ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದರು.