ಬೆಂಗಳೂರು: ಈ ಬಾರಿ ಕೆಲವರಿಗೆ ಪಕ್ಷ ಟಿಕೆಟ್ ನೀಡಿಲ್ಲ, ಅವರಿಗೆ ಬೇರೆ ಜವಾಬ್ದಾರಿ ನೀಡಲಾಗುತ್ತದೆ ಎಂದು ರಾಜ್ಯ ಚುನಾವಣೆ ಸಹ ಉಸ್ತುವಾರಿ ಅಣ್ಣಾಮಲೈ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ಸಿಕ್ಕಿಲ್ಲ ಅಂದ್ರೆ ಅದರರ್ಥ ಕೇಂದ್ರಕ್ಕೂ ಕರೆಸಿಕೊಳ್ಳಬಹುದು. ಹಾಗಾಗಿ ಪರಿವರ್ತನೆಗೆ ಯಾರೂ ಬೇಸರಗೊಳ್ಳಬೇಡಿ ಎಂದರು. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿಯೂ ಸಭೆ ಮಾಡಿ ಟಿಕೆಟ್ ನೀಡಲಾಗಿದೆ. ಎಲ್ಲ ರೀತಿಯ ಅಭಿಪ್ರಾಯದ ಮೂಲಕವೇ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಹಿರಿಯರು, ಪಕ್ಷ ಸಂಘಟನೆ ಮಾಡಿದ್ದಾರೆ. ಹೈಕಮಾಂಡ್ ಬಳಿಯೂ ಚರ್ಚೆ ಮಾಡಿದ್ದಾರೆ. ಈಶ್ವರಪ್ಪ ಈಗಾಗಲೇ ರಾಜಕೀಯ ನಿವೃತ್ತಿ ಹೊಂದಿರುವುದಾಗಿ ಪತ್ರ ಬರೆದಿದ್ದಾರೆ. ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡಿದ್ದಾರೆ. ಅವರೆಲ್ಲರ ಕೊಡುಗೆಯನ್ನು ಪಕ್ಷ ಎಂದಿಗೂ ಮರೆಯಲ್ಲ ಎಂದರು.