ಮೈಸೂರು: ಪಕ್ಷದ ನಾಯಕರು ಚುನಾವಣೆಗೆ ನಿಲ್ಲಲೇಬೇಕು ಎಂದರೆ ಅದಕ್ಕೆ ಸಿದ್ಧ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಜನ ನನ್ನನ್ನು 5 ಬಾರಿ ಗೆಲ್ಲಿಸಿದ್ದಾರೆ. ನನ್ನ ತಂದೆ ಅವರನ್ನೂ ಜನ ಬೆಂಬಲಿಸಿದ್ದರು. ಆದರೆ ಸದ್ಯ ರಾಜಕೀಯ ಪರಿಸ್ಥಿತಿ ಕೂಡ ಹದಗೆಟ್ಟಿದೆ. ನರಸಿಂಹರಾಜ ಕ್ಷೇತ್ರದ ಮತದಾರರ ಋಣ ತೀರಿಸಬೇಕಿದೆ, ವರಿಷ್ಠರು ಏನೇ ತೀರ್ಮಾನ ಮಾಡಿದರೂ ಅದಕ್ಕೆ ಸಹಮತ ಇದೆ ಎಂದರು.
ಚುನಾವಣಾ ರಾಜಕೀಯ ನಿವೃತ್ತಿಗೆ ನಿರ್ಧರಿಸಿದ್ದು ನಿಜ. ಅನಾರೋಗ್ಯ ಕಾರಣದಿಂದ ಮಾತ್ರ ಈ ನಿರ್ಧಾರ ಮಾಡಿದ್ದೇ. ನನಗೆ ಆರೋಗ್ಯ ಚೆನ್ನಾಗಿಲ್ಲ. ಚುನಾವಣೆಗೆ ನಿಲ್ಲುವುದಿಲ್ಲ ಎಂದು ಪತ್ರ ಬರೆದೆ. ಅದೇ ಕಾರಣಕ್ಕೆ ಚುನಾವಣಾ ರಾಜಕೀಯ ನಿವೃತ್ತಿ ಬಯಸಿದ್ದೇನೆ ಆದರೆ ರಾಜಕೀಯ ನಿವೃತ್ತಿಗೆ ಅಭಿಮಾನಿಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ’ ಎಂದು ರಾಜೀನಾಮೆ ಪತ್ರದಲ್ಲಿ ಸೇಠ್ ಉಲ್ಲೇಖಿಸಿದ್ದರು.