Friday, September 29, 2023
spot_img
- Advertisement -spot_img

ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅನ್ವರ್ ಭಾಷಾ ಆಯ್ಕೆ; ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅನ್ವರ್ ಭಾಷಾ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ಶಾಫಿ ಸಅದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಚುನಾವಣೆ ನಿಗದಿಯಾಗಿತ್ತು. ಆದರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಅನ್ವರ್ ಭಾಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ ಚುನಾವಣಾಧಿಕಾರಿಯಿಂದ ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿ ಇದೆ.

ಚಿತ್ರದುರ್ಗ ಜಿಲ್ಲೆಯವರಾದ ಅನ್ವರ್ ಭಾಷಾ, ವಕ್ಫ್ ಬೋರ್ಡ್ ನ ಮುತವಲ್ಲಿ ವಿಭಾಗದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇದೇ ಮೊದಲ ಬಾರಿಗೆ ವಕ್ಫ್ ಬೋರ್ಡ್ ಸದಸ್ಯರಾಗಿ ಚುನಾಯಿತರಾಗಿದ್ದ ಅನ್ವರ್ ಭಾಷಾ, ಇದೀಗ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ನಿಯೋಜಿತರಾಗಿದ್ದಾರೆ.

ಇದನ್ನೂ ಓದಿ: ‘ಸಿದ್ದರಾಮಯ್ಯ ಲಾಟರಿ ಸಿಎಂ ಆದ್ರೆ, ಮೋದಿ ಯೂಸ್‌ಲೆಸ್ಸಾ?’

ನೂತನ ಅಧ್ಯಕ್ಷರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಎಕ್ಸ್‌ನಲ್ಲಿ (ಟ್ವಿಟರ್) ಶುಭಕೋರಿದ್ದಾರೆ. ಮಾನ್ಯ ಹಜ್ ಸಚಿವ ಜನಾಬ್ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜನಾಬ್ ನಸೀರ್ ಅಹಮದ್ ಅವರೊಂದಿಗೆ ಇಂದು, ನೂತನವಾಗಿ ನಿಯುಕ್ತಿಗೊಂಡಿರುವ ಮಾನ್ಯ ವಕ್ಫ್ ಸಮಿತಿ ಅಧ್ಯಕ್ಷರಾದ ಜನಾಬ್ ಅನ್ವರ್ ಭಾಷಾ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಸನ್ಮಾನಿಸಿದೆ ಎಂದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles