Friday, September 29, 2023
spot_img
- Advertisement -spot_img

ಸೌಜನ್ಯ ಪ್ರಕರಣ ಮರುತನಿಖೆಗೆ ನಳಿನ್ ಕುಮಾರ್ ಕಟೀಲ್ ಮನವಿ

ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗಾಗಿ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಹಾಗೂ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : 9 ವರ್ಷದಿಂದ ಒಂದೂ ದಿನ ರಜೆ ಪಡೆಯದ ಪ್ರಧಾನಿ ಮೋದಿ

ಈ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ದಕ್ಷಿಣ ಕನ್ನಡ ಎಂಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ, ಇದುವರೆಗೂ ಆರೋಪಿ ಯಾರೆಂದು ಪತ್ತೆಯಾಗಿಲ್ಲ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಲೇಬೇಕೆಂದು’ ಹೇಳಿದ್ದರು. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯರವರನ್ನು ಭೇಟಿಯಾಗಿ, ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ವಾರದೊಳಗೆ ಅನ್ನಭಾಗ್ಯದ ಅಕ್ಕಿ ಸಮಸ್ಯೆ ಇತ್ಯರ್ಥ : ಕೆ.ಎಚ್. ಮುನಿಯಪ್ಪ

ಉಜಿರೆ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles