ಬೆಂಗಳೂರು: ಸಿದ್ದರಾಮಯ್ಯ ಅವರು ಆಡಿದ ಮಾತುಗಳು, ಸಾಂಸ್ಕೃತಿಕ ಪ್ರಜ್ಞೆ ಇರುವ ಎಲ್ಲರ ಮನ ನೋಯಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.
ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ, ಸಿದ್ದರಾಮಯ್ಯನವರ ವರ್ತನೆಯನ್ನು ಖಂಡಿಸುತ್ತೇನೆ. ಆಡಿದ ಮಾತುಗಳಿಗೆ, ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಟೀಕಿಸುವಾಗ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದು ಕಿಡಿಕಾರಿದರು.
ಸಿಎಂ ಆದವರು ಇಂತಹ ಹೇಳಿಕೆ ಕೊಡಬಾರದು , ನಾಯಿಯಷ್ಟು ನಿಯತ್ತು ಮನುಷ್ಯರಿಗೂ ಇರೋದಿಲ್ಲ ,ಬೊಮ್ಮಾಯಿ ಕರ್ನಾಟಕದ ಸಿಎಂ, ಸಿಎಂ ಬಗ್ಗೆ ಈ ರೀತಿ ಮಾತಾಡೋದು ತಪ್ಪು ಎಂದು ಸಚಿವ ಸೋಮಣ್ಣ ಕಿಡಿಕಾರಿದರು. ಮಾಜಿ ಸಿಂ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಅವರು ನರೇಂದ್ರ ಮೋದಿ ಅವರ ಮುಂದೆ ನಾಯಿಮರಿಯಂತೆ ಇರುತ್ತಾರೆ. ರಾಜ್ಯಕ್ಕೆ ಒಂದಿಷ್ಟು ಅನುದಾನವನ್ನು ತರುವ ಸಾಮರ್ಥ್ಯವೂ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.