ಹಾಸನ : ಕೆ.ಎಂ.ಶಿವಲಿಂಗೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಜೆಡಿಎಸ್ ಶಾಸಕ ಶಿವಲಿಂಗೇಗೌಡ ಜತೆ ಈಗಾಗಲೇ ಚರ್ಚೆ ನಡೆದಿದಿದ್ದು, ಅವರು ಕೂಡ ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಇತ್ತೀಚಿನ ಯಾವುದೇ ಜೆಡಿಎಸ್ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿ, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಶಿವಲಿಂಗೇಗೌಡರು ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆ ಹಲವು ಬಾರಿ ಮಾತುಕತೆ ನಡೆಸಿದ್ದು, ಕೊನೆಗೂ ತೆನೆ ಇಳಿಸಿ ಕೈ ಹಿಡಿಯಲು ತೀರ್ಮಾನಿಸಿದ್ದಾರೆ.
ಶಿವಲಿಂಗೇಗೌಡರು ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರು ಉಳಿದುಕೊಂಡಿದ್ದರು. ಅರಸೀಕೆರೆಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ಮಾಡಿ ಯಶಸ್ವಿಯಾಗಿದ್ದಾರೆ.
ಹಾಸನದಲ್ಲಿ ಜೆಡಿಎಸ್ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌ನ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಸನ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಶಾಸಕ ಕೆ. ಎಂ. ಶಿವಲಿಂಗೇಗೌಡರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಮಾಡಿದ್ದ ಪ್ಲಾನ್ ಸಕ್ಸಸ್ ಆದಂತಿದೆ.