Sunday, March 26, 2023
spot_img
- Advertisement -spot_img

ಅರವಿಂದ್ ಕೇಜ್ರಿವಾಲ್‍ಗೆ ಜೀವ ಬೆದರಿಕೆ : ಆರೋಪಿಯನ್ನು ಬಂಧಿಸಿದ ಪೊಲೀಸರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆದರಿಕೆ ಮತ್ತು ಅವಹೇಳನಕಾರಿ ಇಮೇಲ್‌ಗಳನ್ನು ಕಳುಹಿಸಿದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ರಾಜಸ್ಥಾನದ ಅಜ್ಮೀರ್ ಮೂಲದವನು ಮತ್ತು ಮಾನಸಿಕ ಅಸ್ವಸ್ಥ, ಈ ಹಿಂದೆ ಹಲವಾರು ಜನರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಆರೋಪಿ ಸಿಎಂ ಕೇಜ್ರಿವಾಲ್ ಅವರ ಇಮೇಲ್ ವಿಳಾಸವನ್ನು ಪಡೆದು ಬೆದರಿಕೆ ಮೇಲ್ ಕಳುಹಿಸಿದ್ದಾರೆ ಎಂದು ಪೊಲೀಸರು ಎಎನ್ಐಗೆ ತಿಳಿಸಿದ್ದಾರೆ.

ಈ ಮೊದಲು ಅವರು ಹಲವಾರು ಜನರಿಗೆ ಮೇಲ್ ಮಾಡಿದ್ದಾರೆ. ಈಗ ಆ ವ್ಯಕ್ತಿಯ ಲ್ಯಾಪ್‌ಟಾಪ್ ವಶಪಡಿಸಿಕೊಂಡಿದ್ದು, ಅವರಿಗೆ ವೈದ್ಯಕೀಯ ಸಮಾಲೋಚನೆ ನೀಡಲು ಯೋಜಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕರೆ ಬಂದ ತಕ್ಷಣ ಎಚ್ಚೆತ್ತ ದೆಹಲಿ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ದೆಹಲಿಯ ಗುಲಾಬಿ ಬಾಗ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

- Advertisement -

Latest Articles