Wednesday, May 31, 2023
spot_img
- Advertisement -spot_img

ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್ ಹುಬ್ಬಳ್ಳಿಗೆ ಭೇಟಿ ಮಾ.4 ರಂದು

ಹುಬ್ಬಳ್ಳಿ: ಮಾರ್ಚ್ 4 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭಾ ಚುನಾವಣೆಗೂ ರಾಜ್ಯದಲ್ಲಿ ಸಂಚಲನ ಮೂಡಿಸಲು ದಾವಣಗೆರೆಯಲ್ಲಿ ಸಮಾವೇಶ ನಡೆಸುವಂತೆ ಪಕ್ಷದ ಮುಖಂಡರಿಗೆ ಕೇಜ್ರಿವಾಲ್ ಅವರು ಸೂಚನೆ ನೀಡಿದ್ದು,ಸಾರ್ವಜನಿಕರು ಭಾಗವಹಿಸುವಂತೆ ಪ್ರೋತ್ಸಾಹಿಸುವ ಮೂಲಕ ರ್ಯಾಲಿಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಘಟಕಗಳಿಗೆ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

ಜನರೊಂದಿಗೆ ಸಂಪರ್ಕ ಸಾಧಿಸಲು ಪಕ್ಷದ ಮುಖಂಡರಿಂದ ವಿಮಾನ ನಿಲ್ದಾಣದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ತೆರೆದ ವಾಹನದಲ್ಲಿ ರೋಡ್‌ಶೋ ನಡೆಸಲು ಚಿಂತನೆ ನಡೆಸಲಾಗಿದೆ, ಫೆ. ಅಂತ್ಯದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ,ಸಮಾವೇಶದಲ್ಲಿ ರಾಜ್ಯದಾದ್ಯಂತ ಇರುವ ಬ್ಲಾಕ್ ಮತ್ತು ಬೂತ್ ಮಟ್ಟದ 25 ಸಾವಿರ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

‘ಬ್ಲಾಕ್ ಮಟ್ಟದಲ್ಲಿ ಕಾರ್ಯಕಾರಿಣಿ ಸಭೆ ನಡೆಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಚುನಾವಣೆಗೆ ಅಣಿಗೊಳಿಸಲಾಗುತ್ತಿದೆ. ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಕಾರ್ಯಕರ್ತರ ಪಡೆಯನ್ನು ಕಟ್ಟಲಾಗುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Related Articles

- Advertisement -

Latest Articles