ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿ I.N.D.I.A ಒಕ್ಕೂಟಕ್ಕೆ ಶಾಕ್ ನೀಡಿದೆ. ನಾಳೆ ಮೈತ್ರಿಕೂಟದ ಸಭೆ ನಿಗಧಿಯಾಗಿದ್ದು, ಅದಕ್ಕೂ ಮೊದಲೇ ಪ್ರಧಾನಿ ಅಭ್ಯರ್ಥಿಯಾಗಿ ಅರವಿಂದ್ ಕೇಜ್ರಿವಾಲ್ ಸೂಕ್ತ ವ್ಯಕ್ತಿ ಎಂದಿದೆ.
ದೆಹಲಿಯಲ್ಲಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಇಡೀ ದೇಶಕ್ಕೆ ಅನ್ವಯವಾಗುವಂತಹ ಮಾದರಿಯನ್ನು ನೀಡಿದ್ದಾರೆ. ಹೀಗಾಗಿ ಅವರು ಮುಂದಿನ ಪಿಎಂ ಹುದ್ದೆಗೆ ಸರಿಯಾದ ವ್ಯಕ್ತಿ ಎಂದಿದೆ.
ಎಎಪಿಯ ಮುಖ್ಯ ವಕ್ತಾರ ಪ್ರಿಯಾಂಕ್ ಕಕ್ಕರ್ ಮಾತನಾಡಿ, ಕೇಜ್ರಿವಾಲ್ ಯಾವಾಗಲೂ ಜನಪರ ಬಜೆಟ್ ಅನ್ನೇ ಮಂಡಿಸಿದ್ದಾರೆ. ಹೀಗಾಗಿ ಅವರು ಪ್ರಧಾನಿ ಅಭ್ಯರ್ಥಿಯಾಗಬೇಕು. ಆದರೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನನ್ನ ಕೈನಲ್ಲಿ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ: ಗಡಿ ವಿಚಾರದಲ್ಲಿ ಮೋದಿ ಸುಳ್ಳು ಹೇಳ್ತಿದ್ದಾರೆ; ಪುನರುಚ್ಚರಿಸಿದ ರಾಹುಲ್
ಪ್ರತಿಯೊಂದು ಪಕ್ಷಕ್ಕೂ ಅವರದ್ದೇ ನಾಯಕ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ. ಅದೇ ರೀತಿ ಆಪ್ ನಾಯಕರು ನಮ್ಮ ನಾಯಕರಾದ ಕೇಜ್ರಿವಾಲ್ ಪ್ರಧಾನಿಯಾಗಬೇಕು ಎಂಬ ಅಭಿಪ್ರಾಯವಿದೆ ಎಂದಿದ್ದಾರೆ.
ನಾಳೆ ಹಾಗೂ ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ಮೈತ್ರಿಕೂಟದ ಸಭೆ ಆರಂಭಗೊಳ್ಳಲಿದೆ. ಈ ವೇಳೆ ಮೈತ್ರಿಕೂಟದ ಲೋಗೋ ರಿವೀಲ್ ಆಗುತ್ತಿದ್ದು, ಹಲವು ವಿಚಾರಗಳು ಚರ್ಚೆಯಾಗಲಿದೆ. ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆಗೆ ಕಳೆದ 15 ದಿನಗಳಿಂದ ಸಿದ್ಧತೆ ನಡೆಸಲಾಗುತ್ತಿದೆ. ಸಭೆಯು ಇದೇ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನ ಪಂಚತಾರಾ ಹೋಟೆಲ್ ಗ್ರ್ಯಾಂಡ್ ಹಯಾತ್ ನಲ್ಲಿ ನಡೆಯಲಿದೆ. ಸಭೆಯಲ್ಲಿ ಬಿಜೆಪಿಯನ್ನು ವಿರೋಧಿಸುವ 26 ಪಕ್ಷಗಳು ಭಾಗವಹಿಸಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.