ಬೆಂಗಳೂರು : ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷವಾಯಿತು.ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಅಪ್ಪುವನ್ನು ನೆನಪು ಮಾಡಿಕೊಂಡಿದ್ದು, ಗಮನಸೆಳೆದಿದೆ. ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನಗಳು ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಡಾ ಪುನೀತ್ ರಾಜ್‍ಕುಮಾರ್ ಅವರ ಪುಣ್ಯತಿಥಿಯಾಗಿರುವ ಇಂದು ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ.
ಅವರು ನಟಿಸಿರುವ ಸಿನಿಮಾ, ಹಾಡುಗಳು ಮತ್ತು ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಬಿಟ್ಟು ಹೋಗಿಲ್ಲ ಎಂದು ಅನಿಸುತ್ತದೆ. ಅವರು ಯಾವತ್ತೂ ಪವರ್ ಸ್ಟಾರ್ ಆಗಿಯೇ ಇರುತ್ತಾರೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳು ಸಿನೆಮಾ ಗಣ್ಯರು, ರಾಜಕೀಯ ಗಣ್ಯರು ಪುನೀತ್ ರಾಜ್ ಕುಮಾರ್ ಗೆ ನಮನ ಸಲ್ಲಿಸಿದ್ದಾರೆ. ಇನ್ನೂ ಪವರ್ ಸ್ಟಾರ್’ ಪುನೀತ್ ರಾಜ್‍ಕುಮಾರ್ ಸಮಾಧಿಗೆ ಡಾ. ರಾಜ್‍ಕುಮಾರ್ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಅಪಾರ ಸಂಖ್ಯೆಯಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಕೂಡ ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸುತ್ತಿದ್ದಾರೆ.
ಪುನೀತ್ ರಾಜ್‍ಕುಮಾರ್ ಸಮಾಧಿ ಇರುವ ಕಂಠೀರವ ಸ್ಟುಡಿಯೋ ಹೊರಗೆ ಅಪ್ಪು ಅವರ ವಿಶೇಷವಾದ ಕಟೌಟ್‌ಗಳನ್ನ ಹಾಕಲಾಗಿದೆ. ಪುನೀತ್ ಅಭಿನಯದ ಸಿನಿಮಾಗಳ ಕಟೌಟ್ ಜೊತೆಯಲ್ಲಿ ಡಾ. ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ಅವರ ಕಟೌಟ್ಗಳನ್ನೂ ಹಾಕುವ ಮೂಲಕ ಅಭಿಮಾನ ಮೆರೆಯಲಾಗಿದೆ.