ಹುಬ್ಬಳ್ಳಿ: ಮುಂದಿನ ತಿಂಗಳಿನಿಂದ ‘ಆಶಾಕಿರಣ ಯೋಜನೆ’ ಜಾರಿ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಆರೋಗ್ಯ ವಿಚಾರವಾಗಿ ಒತ್ತು ನೀಡಲಾಗುತ್ತದೆ. ಈ ಹಿಂದೆ ಸಾಂಕ್ರಾಮಿಕ ರೋಗಗಳಿಂದ ಸಾಕಷ್ಟು ಸಾವು ನೋವು ಸಂಭವಿಸುತ್ತಿದ್ದವು, ಈಗ ಸಾಂಕ್ರಾಮಿಕ ರೋಗಗಳ ಸಂಖ್ಯೆ ಜಾಸ್ತಿಯಾಗುತ್ತಿದೆ, ಮುಂದಿನ ತಿಂಗಳು ಆಶಾಕಿರಣ ಯೋಜನೆ ಜಾರಿ ಮಾಡುತ್ತೇವೆ ಎಂದಿದ್ದಾರೆ.
100 ದಿನಗಳ ಆಡಳಿತದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಆಶ್ವಾಸನೆಗಳನ್ನ ಈಡೇರಿಸುವುದಿಲ್ಲ. ಆದರೆ ಸಿದ್ದರಾಮಯ್ಯ ಅವರು ಜನತೆಗೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಆದ್ರೆ ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ: ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಶವ ಪತ್ತೆ!
ಏನಿದು ‘ಆಶಾಕಿರಣ ಯೋಜನೆ’?
ಗ್ರಾಮೀಣ ಭಾಗದ ಬಡವರ ಅನುಕೂಲಕ್ಕಾಗಿ ಕಣ್ಣು ಸಮಸ್ಯೆ ಬಗೆಹರಿಸಲು ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸುವ ಯೋಜನೆಯಾಗಿದೆ. ಇದಕ್ಕಾಗಿ 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ 21 ಕೋಟಿ ರೂ. ಬೆಚ್ಚ ಭರಿಸಲು ಬಜೆಟ್‌ನಲ್ಲಿ ತೀರ್ಮಾನಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.