Monday, December 11, 2023
spot_img
- Advertisement -spot_img

ಇಂದು ‘ಕೈ’ ಹಿಡಿಯಲಿದ್ದಾರೆ ಅಶೋಕ್, ಹೆಚ್‌ಡಿಕೆ ಬೆಂಬಲಿಗರು!

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಇಡೀ ದೇಶದಲ್ಲೇ ಗಮನ ಸೆಳೆದಿದ್ದ ಕರ್ನಾಟಕ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ತಿರುಮಂತ್ರ ಹಾಕಿದ್ದು, ಈಗಾಗಲೇ ಹಲವು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಆರ್.ಅಶೋಕ್ ಅವರ ಅತ್ಯಾಪ್ತರನ್ನೇ ಇಂದು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

ಬಿಜೆಪಿ ಶಾಸಕ ಆರ್.ಅಶೋಕ್ ಹಾಗೂ ಜೆಡಿಎಸ್ ಮುಖಂಡ ಹೆಚ್‌ಡಿ ಕುಮಾರಸ್ವಾಮಿ ಅವರ ಬೆಂಬಲಿಗರು, ಮಾಜಿ ಕಾರ್ಪೊರೇಟರ್‌ಗಳು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.

ಇದನ್ನೂ ಓದಿ; CCB ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ : ಆಸ್ಪತ್ರೆಗೆ ದಾಖಲು

ಹೆಚ್‌ಡಿಕೆ ಅತ್ಯಾಪ್ತರಾದ ಕಬ್ಬಡಿ ಬಾಬು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಿನ್ನೆ ಬಾಬು ಮನೆಗೆ ತೆರಳಿದ್ದ ಸಂಸದ ಡಿ.ಕೆ. ಸುರೇಶ್, ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದರು. ಬಾಬು ಬೇಡಿಕೆಗಳಿಗೆ ‘ಕೈ’ ನಾಯಕರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಅವರು ಇಂದು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಅದೇ ರೀತಿ ಮಾಜಿ ಸಚಿವ ಅಶೋಕ್ ಬೆಂಬಲಿಗರು ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅಶೋಕ್ ಬೆಂಬಲಿಗರು ಕಾಂಗ್ರೆಸ್ ಸೇರುವ ಬಗ್ಗೆ ಈಗಾಗಲೇ ಕಾಂಗ್ರೆಸ್ ಖಚಿತಪಡಿಸಿದೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಮಾಜಿ ಉಪ ಮೇಯರ್, ಮಾಜಿ ಕಾರ್ಪೊರೇಟ್ಗಳು, ಮಾಜಿ ಪಾಲಿಕೆ ಸದಸ್ಯರು, ಹಿರಿಯ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles