ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರನ್ನು ಬಿಜೆಪಿಗೆ ಆಹ್ವಾನ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸುಮಲತಾಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ, ನಾವೇ ಸುಮಲತಾ ಅವರಿಗೆ ಬಿಜೆಪಿ ಪಕ್ಷಕ್ಕೆ ಆಹ್ವಾನ ಕೊಟ್ಟಿದ್ದೇವೆ. ಬೆಂಬಲಿಗರ ಜೊತೆ ಮಾತನಾಡಿ, ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.
ಸುಮಲತಾ ಅಂಬರೀಶ್ ಬಿಜೆಪಿಯ ಅಸೋಸಿಯೇಟ್ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿ,ಸುಮಲತಾ ಅವರು ಸ್ವತಂತ್ರವಾಗಿ ಗೆದ್ದಿರುವ ಅಭ್ಯರ್ಥಿ. ಅವರು ಯಾರಿಗೆ ಬೇಕಾದರೂ ಬೆಂಬಲ ಕೊಡಬಹುದು. ಇದರಿಂದ ಡಿಕೆಶಿಗೆ ಏನು ಸಮಸ್ಯೆ? ಅವರಿಗೆ ಏನಾದರೂ ಸಮಸ್ಯೆ ಇದ್ದರೆ ಬಹಿರಂಗವಾಗಿ ಹೇಳಲಿ ಎಂದರು.
ಸುಮಲತಾ ಅಂಬರೀಶ್ ನಮ್ಮ ಪಕ್ಷಕ್ಕೆ ಅಸೋಸಿಯೇಟ್ ಆದರೆ ಸಂತೋಷವೇ. ಅದನ್ನು ನಾವು ಸ್ವಾಗತ ಮಾಡುತ್ತೇವೆ. ಈಗಾಗಲೇ ಸುಮಲತಾ ಅವರಿಗೆ ಬಿಜೆಪಿಗೆ ಆಹ್ವಾನ ಕೊಟ್ಟಿದ್ದೇವೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.