Sunday, March 26, 2023
spot_img
- Advertisement -spot_img

ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ, ಪಕ್ಷದ ಧ್ವನಿಯಾಗಬೇಕು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ಮಾತನಾಡಿ, ಜನವರಿ 1ರ ಒಳಗಾಗಿ ಎಲ್ಲಾ ಜಿಲ್ಲೆಗಳಿಂದ ಆಯಾ ಜಿಲ್ಲೆಗಳ ಕ್ಷೇತ್ರದ ಪರಿಷ್ಕೃತ ಅರ್ಜಿಗಳ ಪಟ್ಟಿ ನೀಡಬೇಕು. ನಂತರ ರಾಜ್ಯ ಮಟ್ಟದ ಚುನಾವಣಾ ಸಮಿತಿಯು ಮತ್ತೆ ಸಭೆ ಸೇರಿ ಎಲ್ಲ ಮಾನದಂಡಗಳನ್ನು ಅನುಸರಿಸಿ ಮುಂದಿನ ಪ್ರಕ್ರಿಯೆಯನ್ನು ನಡೆಸಲಿದೆ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ ಎಂದರು.

ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.

ಈ ತಿಂಗಳು 31ರ ಒಳಗಾಗಿ ಈ ಪ್ರಕ್ರಿಯೆ ಮುಕ್ತಾಯಗೊಳಿಸಿ ಜನವರಿ ಒಂದರ ಒಳಗಾಗಿ ಪರಿಷ್ಕೃತ ಪಟ್ಟಿಯನ್ನು ನೀಡಬೇಕು ಎಂದು ಸೂಚಿಸಿದ್ದೇವೆ. ಜನವರಿ 5ರಂದು ರಾಜ್ಯಮಟ್ಟದ ಚುನಾವಣೆ ಸಮಿತಿಯು ಮತ್ತೆ ಸಭೆ ನಡೆಸಬೇಕು, ಆದಷ್ಟು ಬೇಗ ಜನ ಜನವರಿ 15ರ ಒಳಗಾಗಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

Related Articles

- Advertisement -

Latest Articles