ಬೆಂಗಳೂರು: ಚುನಾವಣೆ ಬೆನ್ನಲ್ಲೇ ನಾಯಕರು ಇದ್ದ ಪಕ್ಷ ಬಿಟ್ಟು ಬೇರೆ ಪಕ್ಷ ಸೇರುತ್ತಿದ್ದಾರೆ. ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ , ಅರಕಲಗೂಡು ಜೆಡಿಎಸ್ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ದೇವೇಗೌಡರ ಮಕ್ಕಳು ನಡೆಸಿಕೊಳ್ಳುತ್ತಿದ್ದ ರೀತಿಗೆ ರಾಮಸ್ವಾಮಿ ಅಸಾಮಾಧಾನ ಹೊರಹಾಕುತ್ತಲೇ ಬಂದಿದ್ದು , ಸಂತೋಷದಿಂದ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕನಾಗಲು ಅವಕಾಶ ಮಾಡಿಕೊಟ್ಟ ಜೆಡಿಎಸ್ಗೆ ಧನ್ಯವಾದ. ನಾನು ವೈಯಕ್ತಿಕ ಹಿತಾಸಕ್ತಿಯಿಂದ ರಾಜಕೀಯ ಮಾಡಿಲ್ಲ. ನಾನು ಶಾಸಕನಾಗಿದ್ದಾಗ ಜನಪರ ಕೆಲಸ ಮಾಡಿದ್ದೇನೆ. ನಾನು ಸರಿ ಇದ್ರೆ ಸರಿ, ತಪ್ಪಾಗಿದ್ದರೆ ತಪ್ಪು ಎಂದು ಹೇಳಿದ್ದೇನೆ, ನಾನು ಜೆಡಿಎಸ್ ಬಿಟ್ಟೆ ಎಂದು ಎಲ್ಲೂ ಹೇಳಿಲ್ಲ. ಜೆಡಿಎಸ್ನವರೇ ನನ್ನನ್ನು ಹೊರ ಹಾಕಿದರು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇ ನನಗೆ ಮುಳುವಾಯಿತು ಎಂದು ಎಟಿ ರಾಮಸ್ವಾಮಿ ಹೇಳಿದ್ದಾರೆ.
ನನಗೆ ಬಿಜೆಪಿಯಿಂದ ಬೇಜಾರಾಗಿಲ್ಲ. ಮನಸಿಗೆ ನೋವಾಗಿಲ್ಲ. ಪಕ್ಷ ಎಲ್ಲ ಸಹಾಯ ಮಾಡಿದೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನಾನೇನು ಟಿಕೆಟ್ ಗಾಗಿ ಬೇಡಿಕೆ ಇಟ್ಟಿಲ್ಲ. ಕಾಂಗ್ರೆಸ್ ಟಿಕೆಟ್ ಕೊಟ್ಟರೇ ನೋಡೋಣ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.