Friday, September 29, 2023
spot_img
- Advertisement -spot_img

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!

ಬಾಗಲಕೋಟೆ : ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಇಂದು (ಆಗಸ್ಟ್ 28) ಬೆಳಗ್ಗೆ ಯಲ್ಲಪ್ಪ‌ ಹೆಗಡೆ ಬೀಳಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮುಧೋಳ ತಾಲೂಕಿನ ಇಂಗಳಗಿ ಕ್ರಾಸ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬಂದ ಐವರು ಅಪರಿಚಿತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಯಲ್ಲಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಮುಧೋಳದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

ನಿರಾಣಿ-ಹೆಗಡೆ ಕಿತ್ತಾಟ : ಈ ಬಾರಿಯ ವಿಧಾನಸಭಾ ಚುನಾವಣೆಯ ವೇಳೆ ತನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಮುರುಗೇಶ್ ನಿರಾಣಿ ಯಲ್ಲಪ್ಪ ಹೆಗಡೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. 5 ಕೋಟಿ ರೂಪಾಯಿ ಪರಿಹಾರ ಕೋರಿ ಲೀಗಲ್ ನೋಟಿಸ್ ಕಳಿಸಿದ್ದರು.

ನಿರಾಣಿ ಪರಿಹಾರ ಕೇಳಿದ್ದಕ್ಕೆ ಭಿಕ್ಷಾಟಣೆ ಮೂಲಕ ಹಣ ಸಂಗ್ರಹಿಸಿ ನೀಡಲು ಯಲ್ಲಪ್ಪ ಮುಂದಾಗಿದ್ದರು. ಬೀಳಗಿ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಭಿಕ್ಷಾಟಣೆ ನಡೆಸಲು ತೀರ್ಮಾನಿಸಿದ್ದರು. ಅದಕ್ಕೂ ಮುನ್ನ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆದಿದೆ. ಯಾರು, ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles