ಕೊಡಗು : ಕೊಡಗಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತ ಹಾಗೂ ಪಂಚರತ್ನ ರಥದ ಚಾಲಕನ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.
ಚಿಕ್ಕತ್ತೂರಿನ ಅನು ಎಂಬವರ ಮೇಲೆ ಹಲ್ಲೆ ಮಾಡಿ ವಾಹನ ಚಲಾಯಿಸದಂತೆ ತಾಕೀತು ಮಾಡಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಚಿಕ್ಕತ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಗಾಯಾಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಅನು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
“ನಾವು ಮಾಡಿರುವ ಸಾಧನೆಗಳನ್ನು ಜನರಿಗೆ ಅರ್ಥೈಸುವ ನಿಟ್ಟಿನಲ್ಲಿ ಯಾತ್ರೆ ಮಾಡುತ್ತಿದ್ದೇವೆ. ನಿಮಗೆ ತಾಕತ್ತಿದ್ದರೆ ಚುನಾವಣೆ ಮುಖಾಂತರ ಗೆದ್ದು ಉತ್ತರ ಕೊಡಿ. ಇನ್ನು ಮುಂದೆ ಕ್ಷೇತ್ರದಲ್ಲಿ ಈ ರೀತಿಯ ಕೃತ್ಯ ಮಾಡಿದರೆ ನಾವೂ ಸಹ ಸಿದ್ದರಿದ್ದೇವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮುತ್ತಪ್ಪ ಹೇಳಿದ್ದಾರೆ.
ನನ್ನ ಪಂಚರತ್ನ ರಥಯಾತ್ರೆ ನಂತರ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಡುಕ ಉಂಟಾಗಿದೆ ಎಂದಿದ್ದಾರೆ. ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ಗೊತ್ತಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಸಂಘರ್ಷ ಶುರುವಾಗಿದೆ.