ಬೆಂಗಳೂರು: ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಸೋಮವಾರ 20 ರಂದು ಆಟೋ ಸೇವೆ ಬಂದ್ ಆಗಲಿದೆ. ರಾಪಿಡೋ ಸೇವೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಆಟೋ ಚಾಲಕರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಯಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಬದುಕು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಚುನಾವಣೆಗೂ ಮುನ್ನ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸದಿದ್ದರೆ ಚಾಲಕರು ಎಲೆಕ್ಷನ್ ಬಹಿಷ್ಕರಿಸಲು ಸಂಘಟನೆಗಳು ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇಂದಿನಿಂದ ಸಾಂಕೇತಿಕವಾಗಿ ಆಟೋ ಚಾಲಕರು ಪ್ರತಿಭಟಿಸಲಿದ್ದು, ಕಪ್ಪುಬಾವುಟ ಕಟ್ಟಿ ಪ್ರತಿಭಟನೆ ನಡೆಸಲಿದ್ದಾರೆ.
ತಮ್ಮ ಬೇಡಿಕೆ ಈಡೇರದಿದ್ದರೆ ಆಟೋ ಸೇವೆ ಬಂದ್ ಮಾಡಲು ನಿರ್ಧರಿಸಿದ್ದಾರೆ. ರಾಪಿಡೋ ಬೈಕ್ ಸಂಚಾರದಿಂದ ಆಟೋ ಚಾಲಕರಿಗೆ ಬಿಸ್ನೆಸ್ ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ನ್ಯಾಯಬದ್ದವಾಗಿ ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದ್ದೇವೆ. ಬೈಕ್, ಟ್ಯಾಕ್ಸಿಗಳು ಸೇವೆ ನೀಡುತ್ತಿರುವುದು ಎಷ್ಟು ಸರಿ? ಹೀಗಾಗಿ ಹೀಗೆ ಬೈಕ್ ಸೇವೆ ನೀಡುತ್ತಿರುವ ಕಂಪನಿಗಳ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.