ಶಿವಮೊಗ್ಗ: ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿರುವ ಎಂಎಲ್‌ಸಿ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಅವರು, 5 ರೂಪಾಯಿ ನೀಡಿ ಸದಸ್ಯತ್ವ ಸ್ವೀಕರಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್ ಸದಸ್ಯತ್ವ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಬಳಿಕ ಮಾತನಾಡಿದ ಆಯನೂರು ಮಂಜುನಾಥ್,’ 24ರಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್‌ನಲ್ಲಿ ಅಧಿಕೃತವಾಗಿ ಕೆಲಸ ಆರಂಭಿಸಲು ಇಂದು ತಾಂತ್ರಿಕ ಪ್ರಕ್ರಿಯೆ ನಡೆಸಿದ್ದೇನೆ. ಜಿಲ್ಲೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆ ಸೇರಿದಂತೆ ಇತರೆ ಚುನಾವಣೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: ‘ದಿನದಿಂದ ದಿನಕ್ಕೆ ಬಿಜೆಪಿ ಕುಗ್ಗುತ್ತಿದೆ, ನಾಯಕನಿಲ್ಲದೆ ಸೊರಗುತ್ತಿದೆ’
‘ಸರ್ಕಾರ ಬಡವರ ಬಗ್ಗೆ ಕಾಳಜಿ ಇಟ್ಟುಕೊಂಡು ಯಾವ ಯಾವ ಯೋಜನೆ ಜಾರಿಗೆ ತಂದಿದೆಯೋ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳುತ್ತೇವೆ. ಶಿವಮೊಗ್ಗದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಪರ್ವ ಕಾಲ ಬರಬೇಕಿದೆ. ಕೆಲವರಿಂದ ಶಿವಮೊಗ್ಗದಲ್ಲಿ ಶಾಂತಿ ಹದಗೆಟ್ಟಿದೆ. ಕಾಂಗ್ರೆಸ್ ಅನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕಿದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.