Saturday, June 10, 2023
spot_img
- Advertisement -spot_img

ಬಿಜೆಪಿಗೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದೇನೆ : ಆಯನೂರು ಮಂಜುನಾಥ್

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವರಾಜ್ ಹೊರಟ್ಟಿಯವರನ್ನು ಭೇಟಿ ಮಾಡಿ, ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದರು. ಈ ಹಿಂದೆ ತಿಳಿಸಿದಂತೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ, ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗೆ ವಿಧಾನ ಸಭೆ ಪ್ರವೇಶ ಬಯಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ವ್ಯಕ್ತಪಡಿಸಿದರು.

ಆಯನೂರು ಮಂಜುನಾಥ್ ಈ ಬಾರಿಯ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದ್ದು, ಟಿಕೆಟ್ ಕೈತಪ್ಪುವ ಸೂಚನೆ ಸಿಕ್ಕಿದೆ, ಹೀಗಾಗಿ ಬಿಜೆಪಿ ತೊರೆಯುತ್ತಿದ್ದಾರೆ. ನಾನು ಟಿಕೆಟ್‌ಗಾಗಿ ಪಕ್ಷ ಬಿಡುತ್ತಿಲ್ಲ. ಶಿವಮೊಗ್ಗದ ಜನರ ಋಣ ತೀರಿಸಲು ಈ ನಿರ್ಧಾರಕ್ಕೆ ಬಂದಿದ್ದೇನೆ. ನಾನು ಕೊಡುವ ಲೆಕ್ಕ ತುಂಬಾ ಇದೆ. ಈ ಚುನಾವಣೆಯಲ್ಲಿ ಕೊಡುತ್ತೇನೆ. ಯಡಿಯೂರಪ್ಪ ಪರ ಧ್ವನಿ ಎತ್ತಿದ ಏಕೈಕ ನಾಯಕ ನಾನು. ಅವರ ಮೇಲೆ ಆರೋಪ ಬಂದಾಗ ನಾನು ಒಬ್ಬನೇ ಅವರ ಪರವಾಗಿ ಉತ್ತರ ನೀಡಿದ್ದೆ” ಎಂದು ಹೇಳಿದರು.

ಅಂದಹಾಗೆ ಆಯನೂರು ಮಂಜುನಾಥ್ ಅವರ ಮುಂದಿನ ನಡೆ ಏನು ? ಆಯನೂರು ಮಂಜುನಾಥ್ ಯಾವ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ? ಅನ್ನೋದು ಗೊತ್ತಾಗಬೇಕಿದೆ.

Related Articles

- Advertisement -spot_img

Latest Articles