ಶಿವಮೊಗ್ಗ : ಕೆಲವು ದಿನಗಳಿಂದ ನನ್ನ ಬಗ್ಗೆ ರಾಜಕೀಯ ಕೇಂದ್ರಿತ ಸುದ್ದಿಗಳು ಹರಿದಾಡಿವೆ, ಎಲ್ಲರ ನಿರೀಕ್ಷೆಯಂತೆ ನಾಳೆ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
ಮಾಧ್ಯಮದರೊಂದಿಗೆ ಮಾತನಾಡಿ, ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾಗಿದ್ದೇನೆ, ನಾನು ನನ್ನ ಸ್ನೇಹಿತರ ಜೊತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇನೆ, ವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರಬೇಕಿತ್ತು, ಆಗ ಜೆಡಿಎಸ್ ನಿಂದ ನಾನು ಸ್ಪರ್ಧೆಗಿಳಿಯಬೇಕಾಯ್ತು, ಮುಂಬರುವ ಚುನಾವಣೆಯಲ್ಲಿ ಸಮಯ, ಶಕ್ತಿ ನೀಡಿ ದುಡಿಯುವ ನಿಲುವನ್ನು ಹೊಂದಿದ್ದೇನೆ ಎಂದು ವಿವರಿಸಿದರು.
ಇದನ್ನೂ ಓದಿ: ಚಂದ್ರಯಾನ 3 ಯಶಸ್ವಿಗೆ ಪೇಜಾವರ ಶ್ರೀಗಳಿಂದ ವಿಶೇಷ ಪೂಜೆ
ಮುಂಬರುವ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ಇದು ನನ್ನ ಕೊನೆಯ ಬಸ್ ಸ್ಟಾಪ್ ಆಗಿದೆ, ಕಾಂಗ್ರೆಸ್ ಗೆ ಈಗ ಸೇರಿಕೊಳ್ಳುತ್ತಿದ್ದೇನೆ, ಆಗ ಅನಿವಾರ್ಯವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದೆ ಎಂದರು.
ಆತಂಕಕ್ಕೆ ಒಳಗಾಗಿರುವ ಕೆಲವು ನಾಲ್ಕು ಜನರು ನನಗೆ ವಿರೋಧಿಸುತ್ತಿದ್ದಾರೆ, ಕೆಲವರ ವಿರೋಧ ಇದ್ದರೂ ಶೇ. 99 ರಷ್ಟು ಜನರು ನನ್ನನ್ನು ಒಪ್ಪಿದ್ದಾರೆ, ನನಗೆ ವಿರೋಧಿಸುವವರಿಗೆ ನಾನು ಯಾವುದೇ ಅಡ್ಡಿಯಾಗಲ್ಲ, ನಿರಾಶೆಯಾದವರು ಯಾಕೋ ಆತಂಕಕ್ಕೊಳಗಾಗಿದ್ದಾರೆ, ನಾನು ಮತ್ತಷ್ಟು ಬಲ ತುಂಬಲು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದೇನೆ, ವಿರೋಧ ಮಾಡುವವರಿಗೆ ನಾನು ಅಡ್ಡಿಯಾಗಲ್ಲ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.