ಚಿತ್ರದುರ್ಗ/ಶಿವಮೊಗ್ಗ: ಬಿಜೆಪಿ ಎಂಎಲ್ಸಿ ಆಯನೂರು ಮಂಜುನಾಥ್ ಜೆಡಿಎಸ್ಗೆ ಸೇರ್ಪಡೆಯಾಗಿದ್ದಾರೆ, ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಬಾವುಟ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಇದೇ ವೇಳೆ ಬಿ ಫಾರಂ ನೀಡಿ ಶಿವಮೊಗ್ಗ ದಿಂದಲೇ ಕಣಕ್ಕಿಯಲು ಆಯನೂರು ಮಂಜುನಾಥ್ ಸಜ್ಜಾಗಿದ್ದು, ಸಂಜೆ 4ಕ್ಕೆ ಆಯನೂರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಜೊತೆಗೆ ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಬಿಜೆಪಿಗೆ ರಾಜೀನಾಮೆ ನೀಡುತ್ತಿರುವೆ. ಟಿಕೆಟ್ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ ಎಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.
ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಮಧ್ಯಾಹ್ನದ ಬಳಿಕ ತಿಳಿಸುವೆ ಎಂದು ಹೇಳಿದ್ದರು.