ಬೆಳಗಾವಿ: ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳವನ್ನು ಸರ್ವಾನುಮತದಿಂದ ಒಪ್ಪಿಗೆ ಪಡೆದು ಬಿಲ್ ಪಾಸ್ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ನಿನ್ನೆ ಸದನದಲ್ಲಿ ಎಸ್‌ಸಿ ಎಸ್ ಟಿ ಮೀಸಲಾತಿ ಹೆಚ್ಚಳದ ಮೂಲಕ ಐತಿಹಾಸಿಕ ತೀರ್ಮಾನ ಆಗಿದೆ. ನಿಯಮ 69 ಅಡಿಯಲ್ಲಿ ಮೀಸಲಾತಿ ಹೆಚ್ಚಳದ ಬಿಲ್ ಪಾಸ್ ಮಾಡಿದ್ದೇವೆ. ಎಲ್ಲರ ಸರ್ವಾನುಮತದಿಂದ ಬಿಲ್ ಪಾಸ್ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನು ವಿಧಾನ ಪರಿಷತ್‌ನಲ್ಲೂ ಬಿಲ್ ಪಾಸ್ ಮಾಡಿ, ಶೆಡ್ಯೂಲ್ 9ರಲ್ಲಿ ಸೇರಿಸಿ ಕೇಂದ್ರದಿಂದಲೂ ಅನುಮತಿ ಪಡೆಯಲಾಗುವುದು ಎಂದರು. ಇನ್ನೂ ರೆಡ್ಡಿಯವರ ಹೊಸ ಪಕ್ಷದ ಬಗ್ಗೆ ಉತ್ತರಿಸಿ, ನಮ್ಮದು ರಾಷ್ಟ್ರೀಯ ಪಕ್ಷ, ಪಕ್ಷ ನನಗೆ ತಾಯಿ ಇದ್ದಹಾಗೆ. ನನಗೆ ಇಷ್ಟೊಂದು ಸ್ಥಾನಮಾನ ನೀಡಿದೆ. ಸ್ನೇಹ ಮತ್ತು ರಾಜಕಾರಣ ಒಂದೇ ತಟ್ಟೆಯಲ್ಲಿ ತೂಗಬೇಡಿ, ನಮ್ಮ ಪಕ್ಷ ಏನೇ ಕೆಲಸ ಹೇಳಿದರೂ ಮಾಡುವೆ ಎಂದರು.
ಜನಾರ್ಧನರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಇದರಿಂದ ನಮಗೆ ಯಾವುದೇ ಟಾಸ್ಕ್ ಆರಂಭವಾಗಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. 2023ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವುದು ನಮ್ಮ ಟಾಸ್ಕ್ ಆಗಿದೆ. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಉದ್ದೇಶವಾಗಿದೆ ಎಂದರು.