ಬೆಂಗಳೂರು: ಸದ್ಯ ಆಡಳಿತಕ್ಕೆ ಬಂದಿರುವುದು ಡಬಲ್ ಸ್ಟೇರಿಂಗ್ ಸರ್ಕಾರ, ಮುಖ್ಯಮಂತ್ರಿಗೊಂದು ಸ್ಟೇರಿಂಗ್, ಉಪಮುಖ್ಯಮಂತ್ರಿಗೊಂದು ಸ್ಟೇರಿಂಗ್ ಎಂದು ಬಿ ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದ ಮುಖ್ಯಮಂತ್ರಿ ಮುಂದಿನ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತಾರೋ, ಇಲ್ಲವೋ ಎಂಬುದೇ ಗ್ಯಾರಂಟಿ ಇಲ್ಲ ಯಾರು ಯಾವ ಕಡೆ ಸ್ಟೇರಿಂಗ್ ಎಳೆಯುತ್ತಾರೆ ಎಂಬುದೇ ಗೊತ್ತಿಲ್ಲ. ಬಸ್ ಯಾವ ಕಡೆ ಹೋಗುತ್ತದೆ ಅಂತಾ ಕಾದು ನೋಡಬೇಕು. ಒಟ್ಟಿನಲ್ಲಿ ಆ ದೇವರೇ ಇವರಿಗೆ ಬುದ್ದಿ ಕಲಿಸುತ್ತಾರೆ ಎಂದರು.
ಕೇಸರಿ ಬಗ್ಗೆ ಕಾಂಗ್ರೆಸ್ ನವರಿಗೆ ಸಿಟ್ಟು ಯಾಕೆಂದು ಗೊತ್ತಿಲ್ಲ. ಇಡೀ ದೇಶದಲ್ಲೇ ಅಧಿಕಾರಕ್ಕೆ ಬಂದಿದ್ದೇವೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್ ನವರು ಇದ್ದಾರೆ. ಇಂತಹ ಭ್ರಮೆಯಲ್ಲಿದ್ದಾರೆ ಮುಂದಿನ ಲೋಕಸಭೆ ಶಾಸಕ ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ನಡೆದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು.
ಇನ್ನೂ ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಮೊದಲ ಬಾರಿಗೆ ವಿಧಾನ ಸೌಧ ಪ್ರವೇಶಿಸಿದ್ದಾರೆ,