ಬೆಂಗಳೂರು : ಪಕ್ಷ ಸೂಚಿಸುವ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಬಾರಿಯಂತೆ ಈ ಬಾರಿಯೂ ಕೆ ಆರ್ ಪೇಟೆ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದರು. ಕೇಂದ್ರ ನಾಯಕರು ಟಿಕೆಟ್ ಹಂಚಿಕೆ ಮಾಡಿದ್ದಾರೆ, ಹತ್ತಾರು ಬಾರಿ ಯೋಚಿಸಿಯೇ ಟಿಕೆಟ್ ಹಂಚಿದ್ದಾರೆ,
ಬಿಜೆಪಿ ಜಗತ್ತಿನ ಅತೀ ದೊಡ್ಡ ಪಕ್ಷ, ಟಿಕೆಟ್ ಹಂಚಿಕೆ ವಿಷಯದಲ್ಲಿ ಅಸಾನಮಾಧ ಇರೋದು ಸಹಜ, ಕೇಂದ್ರ ಹಿರಿಯ ನಾಯಕರು ಹತ್ತಾರು ಬಾರಿ ಯೋಚನೆ ಮಾಡಿ ಟಿಕೆಟ್ ಘೋಷಿಸಿದ್ದಾರೆ, ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಕಠಿಣ ನಿರ್ಧಾರ ಕೈಗೊಂಡಿದ್ದಾರೆ, ಯಾರಿಗೆ ಅಸಾಮಾಧಾನವಿದ್ದರೂ ಅದನ್ನು ವರಿಷ್ಠರು ಬಗೆಹರಿಸುತ್ತಾರೆ ಎಂದು ತಿಳಿಸಿದರು.
ಜೆಡಿಎಸ್ ಕಿಂಗ್ ಮೇಕರ್ ಆಗುವ ಭ್ರಮೆಯಲ್ಲಿದೆ, ಈ ಬಾರಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಈ ಬಾರಿ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಗುರಿ ಇಟ್ಟುಕೊಂಡಿದ್ದೇವೆ ಎಂದರು.