ಬೀದರ್: ಯಾವುದೇ ಗೊಂದಲವಿಲ್ಲದೆ ಹಾಸನ ಟಿಕೆಟ್ ಸಮಸ್ಯೆ ಬಗೆಹರಿಯುತ್ತೆ ಎಂದು JDS ಶಾಸಕ ಬಂಡೆಪ್ಪ ಕಾಶಂಪುರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಹಾಸನದಲ್ಲಿ ಟಿಕೆಟ್ ವಿಚಾರವಾಗಿ ಗೊಂದಲ ಏರ್ಪಟ್ಟಿದೆ, ಹಾಸನ ಟಿಕೆಟ್ ಯಾರ ಪಾಲಾಗಲಿದೆ ಎಂಬ ಗೊಂದಲ ಸಹಜ ಎಲ್ಲರಲ್ಲೂ ಇದೆ, ಎಲ್ಲರೂ ಒಂದಾಗಿ ಪಕ್ಷ ಬೆಳೆಸುವ ಕೆಲಸ ಮಾಡುತ್ತೇವೆ. ಟಿಕೆಟ್ ವಿಚಾರವಾಗಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಚರ್ಚಿಸಿ ಬಗೆಹರಿಸುತ್ತಾರೆ ಎಂದು ತಿಳಿಸಿದರು.
ಜೆಡಿಎಸ್ನ ಮೂಲ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ , ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವ ಶಕ್ತಿ ಕಾರ್ಯಕರ್ತರಿಗೆ ಇದೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಆ ಮಾತಿಗೆ ನಾನು ಬದ್ದನಾಗಿದ್ದೇನೆ. ನಾವು ಉಳಿದಿರುವುದೆ ನಿಮ್ಮಂತ ಲಕ್ಷಾಂತರ ಕಾರ್ಯಕರ್ತರ ಬಲದಿಂದ ಎಂದು ಹೇಳಿದರು.
ಕೇವಲ ಹಾಸನ ವಿಧಾನಸಭಾ ಕ್ಷೇತ್ರಕ್ಕಾಗಿ ನನ್ನ ಪಕ್ಷ ಹಾಳು ಮಾಡಿಕೊಳ್ಳಲು ನಾನು ತಯಾರಿಲ್ಲ, ಇದನ್ನು ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಪರೋಕ್ಷವಾಗಿ ಭವಾನಿ ರೇವಣ್ಣನಿಗೆ ಚಾಟಿ ಬೀಸಿದ್ದಾರೆ. ಹಾಸನದ 7 ಕ್ಷೇತ್ರ ಸೇರಿದಂತೆ ರಾಜ್ಯದ 123 ಕ್ಕೂ ಹೆಚ್ಚು ಸ್ಥಾನವನ್ನು ನಾವು ಗೆಲ್ಲಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು.