Monday, March 27, 2023
spot_img
- Advertisement -spot_img

ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ , ನಮ್ಮಲ್ಲಿ ಗೊಂದಲಗಳಿಲ್ಲ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕೊಪ್ಪಳಕ್ಕೆ ಬರುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ. ನನ್ನನ್ನು ಪಕ್ಷ ನಿರ್ಲಕ್ಷ್ಯ ಮಾಡುತ್ತಲೂ ಇಲ್ಲ, ನಾವೆಲ್ಲಾ ಒಟ್ಟಾಗಿದ್ದೇವೆ, ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ ಎಂದರು. ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಎಂದರು.

ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತರ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೇ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಅಂತ ಹೇಳಿದರು.ಬಿಜೆಪಿ ಪರ ವಾತಾವರಣ ರಾಜ್ಯದಲ್ಲಿ ಇದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮಗಳು ರಾಜ್ಯದಲ್ಲಿ ನಡೆಯುತ್ತವೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

- Advertisement -

Latest Articles