ಸೊರಬ: ಈ ಬಾರಿ ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ನಮೋ ವೇದಿಕೆಯ ಸಾವಿರಾರು ಕಾರ್ಯಕರ್ತರು ಬೃಹತ್ ಬೈಕ್ ರ್ಯಾಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೊರಬ ತಾಲೂಕಿನ ಮೂಲ ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಕುಮಾರ್ ಬಂಗಾರಪ್ಪಗೆ ಟಿಕೆಟ್ ನೀಡದಂತೆ ಸಂದೇಶ ರವಾನಿಸಿದ್ದಾರೆ. ವಿಧಾನ ಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಸೊರಬದ ಮೂಲಕ ಬಿಜೆಪಿಗರು ಹಾಗೂ ಆರ್ಎಸ್ಎಸ್ ಮುಖಂಡರು ಬೃಹತ್ ಬೈಕ್ ರ್ಯಾಲಿ ಮಾಡಿದ್ದಾರೆ.
ಈ ವೇಳೆ ಬಿಜೆಪಿ ಹಿರಿಯ ಮುಖಂಡ ಪದ್ಮನಾಭ ಭಟ್ ಹಾಗೂ ಸೊರಬ ನಮೋ ವೇದಿಕೆಯ ಪಾಣಿ ರಾಜಪ್ಪ ಅವರು ಕುಮಾರ್ ಬಂಗಾರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದರು. ಸಾವಿರಾರು ಜನರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ 2 ಕಿ ಮೀ ದೂರ ಜಾಥಾ ನಡೆಸಿದರು. ಅಮ್ಮಾ, ಅಪ್ಪನಿಗೆ ಕೈಕೊಟ್ಟ ದುರಹಂಕಾರಿ, ಇಂತಹವರಿಂದ ಕಾರ್ಯಕರ್ತರಾಗಲಿ, ಪಕ್ಷವಾಗಲಿ, ಸಂಘಟನೆಗೊಳ್ಳಲು ಸಾಧ್ಯವಿಲ್ಲ ಅಂತ ಅಂದ್ರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆಕ್ರೋಶಿಸಿದ್ದಾರೆ.