ನವದೆಹಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬಾನ್ಸುರಿ ಸ್ವರಾಜ್ ಕಾನೂನು ಪ್ರಕ್ರಿಯೆಗಳಲ್ಲಿ ಅನುಭವ ಹೊಂದಿರುವ ವಕೀಲರಾಗಿದ್ದು, ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ದೆಹಲಿಯ ಕಾನೂನು ಘಟಕದ ಸಹ ಸಂಚಾಲಕರನ್ನಾಗಿ ನೇಮಕ ಮಾಡಿದೆ.
ಅಂದಹಾಗೆ ಪಕ್ಷದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಬಾನ್ಸುರಿ ನೇಮಕವು ಈಗಿನಿಂದಲೇ ಜಾರಿಗೆ ಬರಲಿದೆ ಎಂದಿದ್ದಾರೆ. ನಂತರ ಮಾತನಾಡಿ, ದೆಹಲಿ ಬಿಜೆಪಿಯ ಕಾನೂನು ವಿಭಾಗದ ಸಹ ಸಂಚಾಲಕನಾಗಿ ಪಕ್ಷಕ್ಕೆ ಹೆಚ್ಚು ಸಕ್ರಿಯವಾಗಿ ಸೇವೆ ಸಲ್ಲಿಸಲು ನನಗೆ ಔಪಚಾರಿಕವಾಗಿ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಇನ್ನೂ ತಮ್ಮನ್ನು ನೇಮಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ,ಬಿಜೆಪಿಯ ಉನ್ನತ ನಾಯಕರಿಗೆ ಟ್ವೀಟ್ ಮಾಡಿ ಧನ್ಯವಾದ ಅರ್ಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ, ಬಿಎಲ್ ಸಂತೋಷ್, ವೀರೇಂದ್ರ ಸಚ್‌ದೇವ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಮತ್ತು ನಾನು ಬಿಜೆಪಿಯನ್ನು ತುಂಬಾ ಇಷ್ಟಪಡುತ್ತೇನೆ. ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ.