ಮಂಡ್ಯ : ಜನವರಿ ಅಥವಾ ಫೆಬ್ರವರಿಯಲ್ಲಿ ಬರಾಕ್ ಒಬಾಮಾ ಸಕ್ಕರೆ ನಾಡು ಮಂಡ್ಯಕ್ಕೆ ಭೇಟಿ ನೀಡಲಿದ್ದು, ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಭೂದೇವಿ ಆಧ್ಯಾತ್ಮಿಕ ಕೇಂದ್ರದ
ಶಂಕುಸ್ಥಾಪನೆಗೆ ಒಬಾಮಾ ಆಗಮಿಸಲಿದ್ದಾರೆ.
ಬರಾಕ್ ಒಬಾಮಾ ಭೇಟಿ ಹಿನ್ನಲೆ ಸಿಎಂ ಸಿದ್ದರಾಮಯ್ಯ ಜೊತೆಗೆ ಇಂದು ಸಭೆ ನಡೆದಿದ್ದು, ಡಾ.ಮೂರ್ತಿ ಸೇರಿ ಮಂಡ್ಯ ಜಿಲ್ಲೆಯ ಕೆಲವು ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಒಬಾಮಾ ಸಂಚರಿಸುವ ರಸ್ತೆ ಅಭಿವೃದ್ಧಿ ಸೇರಿ ಕೆಲವು ಕಾಮಗಾರಿ ಬಗ್ಗೆ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ : ನಮ್ಮ ರೈತರಿಗೆ ನೀರು ಇಟ್ಟುಕೊಂಡೇ, ತಮಿಳುನಾಡಿಗೆ ಬಿಟ್ಟಿದ್ದೆವು: ಕಾರಜೋಳ
ಅಂದಹಾಗೆ ಸರ್ವಧರ್ಮ ಸಮನ್ವಯ ಕೇಂದ್ರವಾಗಲಿರುವ ಆಧ್ಯಾತ್ಮಿಕ ಕೇಂದ್ರದಲ್ಲಿ ಒಂದು ಧರ್ಮಕ್ಕೆ ಸೀಮತ ಮಾಡದೇ ಎಲ್ಲಾ ಧರ್ಮಗಳು ಸಮಾನ ಎಂದು ಸಾರುವ ಸದುದ್ದೇಶದೊಂದಿಗೆ ನಿರ್ಮಾಣ ಮಾಡಲಾಗಿದೆ. ಅಮೇರಿಕಾದ ಖ್ಯಾತ ಸರ್ಜನ್ ಜನರಲ್ ಡಾ.ವಿವೇಕ್ ಮೂರ್ತಿ ತಂದೆ ಡಾ.ಮೂರ್ತಿ ಅವರಿಂದ ಮದರ್ ಅರ್ಥ್ ನಿರ್ಮಾಣ ಮಾಡಲಾಗಿದೆ.
ಹಲ್ಲೇಗೆರೆ ಗ್ರಾಮದವರೇ ಆಗಿರುವ ಡಾ.ಮೂರ್ತಿ, ಸದ್ಯ ಅಮೇರಿಕದಲ್ಲಿ ವಾಸವಾಗಿದ್ದಾರೆ. ಈಗ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣಕ್ಕೆ ಮುಂದಾಗುವ ಮೂಲಕ ಸರ್ವ ಧರ್ಮ ಸಮನ್ವಯ ಸಂದೇಶ ಸಾರಲು ಹೊರಟಿರುವ ಡಾ.ಮೂರ್ತಿ, ಹುಟ್ಟೂರನ್ನು ಮರೆಯದೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮಂಟಪದಲ್ಲಿ ಭೂ ದೇವಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗಿದ್ದು, ಭೂಮಿ ಪ್ರತಿಮೆ ಜೊತೆಗೆ ಪ್ರಪಂಚದ ವಿಶ್ವ ಮಾನವರ ಪ್ರತಿಮೆ ನಿರ್ಮಾಣ ಮಾಡಲು ಯೋಚನೆ ಮಾಡಲಾಗಿದೆ. 12 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಭೂದೇವಿ ಆಧ್ಯಾತ್ಮಿಕ ಕೇಂದ್ರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ 64 ಮಂದಿ ವಿಶ್ವಮಾನವರ ಪ್ರತಿಮೆಗೆ ಪ್ಲಾನ್ ಮಾಡಲಾಗಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಆಧ್ಯಾತ್ಮಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಲಿದ್ದು, ಬರಾಕ್ ಒಬಾಮಾ ದಂಪತಿಯಿಂದ ಶಂಕುಸ್ಥಾಪನೆ ನೆರವೇರಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.