ಮುಹೂರ್ತ ಫಿಕ್ಸ್, ಕೆಲವೇ ದಿನಗಳಲ್ಲಿ ಯತ್ನಾಳ್‌ ಬಿಜೆಪಿಗೆ ವಾಪಸ್; ರಮೇಶ್‌ ಜಾರಕಿಹೊಳಿ ಹೇಳಿಕೆ

ಬೆಳಗಾವಿ : ಉಚ್ಚಾಟಿತ ಬಿಜೆಪಿ ಶಾಸಕ ಹಾಗೂ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೆಲವೇ ದಿನಗಳಲ್ಲಿ ವಾಪಸ್ ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು.

ಇದನ್ನೂ ಓದಿ : ನಾನು ಸಿಎಂ ಆದ ಮೊದಲ ಸಂಪುಟ ಸಭೆಯಲ್ಲೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೀನಿ : ಯತ್ನಾಳ್

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದರು.

ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಈಗಾಗಲೇ ಅವರ ಆಗಮನಕ್ಕೆ ವೇದಿಕೆ ಸಜ್ಜಾಗಿದೆ. ಅವರು ಬಂದರೆ ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ವಿಶ್ವಾಸ ಇದೆ ಎಂದರು.

Leave a Reply

Your email address will not be published. Required fields are marked *