ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರಲು ಪ್ಲಾನ್ ಮಾಡಿದ್ದು ನಿಜ. ಒಂದು ವೇಳೆ ಬಿಜೆಪಿಗೆ ಅವರನ್ನ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರುವ ಪ್ಲಾನ್ ನಡೆದಿತ್ತು. ರಾಷ್ಟ್ರೀಯ ನಾಯಕರೊಬ್ಬರು ಕರೆ ಮಾಡಿದ್ದರು. ಬಿಜೆಪಿಯಲ್ಲಿ ಡಿಕೆಶಿ ಸಿಎಂ ಹಾಗೂ ವಿಜೇಂದ್ರ ಡಿಸಿಎಂ ಆಗುವ ಪ್ಲಾನ್ ನಡೆಯುತ್ತಿದೆ ಎಂದಿದ್ದರು. ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಿಂದ 90 ಶಾಸಕರನ್ನು ಕರೆತರುತ್ತಾರೆ ಅಂದುಕೊಂಡಿದ್ದರು. ಆದ್ರೆ 15 ಶಾಸಕರಷ್ಟೇ ಡಿ.ಕೆ.ಶಿವಕುಮಾರ್ ಅವರ ಪರವಾಗಿದ್ದಾರೆ ಅಂತ ಗೊತ್ತಾದ ಮೇಲೆ ಪ್ಲಾನ್ ಕೈ ಬಿಟ್ಟರು.ಈ ಹಿಂದೆ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರಲು ಪ್ಲಾನ್ ಮಾಡಿದ್ದು ನಿಜ ಇದನ್ನು ನಾನು ವಿರೋಧಿಸುತ್ತೇನೆ ಎಂದು ನನ್ನನ್ನು ಬಿಜೆಪಿಯಿಂದ ಉಚ್ಛಾಟಿಸಿದ್ದಾರೆ ಎಂದು ಮಂಡ್ಯದಲ್ಲಿ ಸ್ಫೋಟಕ ಹೇಳಿಕೆ ನೀಡಿದರು.