ವಿಜಯಪುರ: ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು, ಅವರನ್ನ ಧಮ್ ಇದ್ರೆ ತಾಕತ್ ಇದ್ರೆ ಡಿಕೆಶಿ ಉಚ್ಚಾಟನೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ರವರು ಡಿಸಿಎಂ ಡಿಕೆಶಿವಕುಮಾರ್ ಸವಾಲು ಹಾಕಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಬಗ್ಗೆ ಮಾತನಾಡಿದ್ದಾಗ ನನ್ನ ಮೇಲೆ ನಮ್ಮ ಹೈಕಮಾಂಡ್ ಕ್ರಮ ಕೈಗೊಳ್ಳುವ ಕುರಿತು ನನಗೆ ಡಿಕೆಶಿ ಮಾತನಾಡಿದ್ದರು, ಈಗ ಕ್ರಮಕೈಗೊಳ್ಳಲಿ ನೋಡೋಣ. ಅದು ಸಾಧ್ಯ ಆಗಲ್ಲ ಎಂದು ತಿಳಿಸಿದರು.
ಇದನ್ನೂ ಓದಿ : ಬಿಜೆಪಿಯಲ್ಲಿ ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ : ಸಿಎಂಗೆ ರಾಘವೇಂದ್ರ ಟಾಂಗ್
ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದು ಪಕ್ಷದ ವಿರುದ್ಧವೇ ಬಿಕೆ ಹರಿಪ್ರಸಾದ್ ಅಸಾಮಾಧಾನ ವ್ಯಕ್ತಪಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ ಎಂದರು.
ಇದನ್ನೂ ಓದಿ : ಮಣಿಪುರದಲ್ಲಿ ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!
ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತನಾಡುತ್ತಾನೆ. ಆದರೆ ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ ನಾನು. ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಮುದಾಯದ ಯಾರೂ ಕೂಡ ನಾನು ಸಿಎಂ ಅಥವಾ ಮಂತ್ರಿ ಆಗ್ತೀನಿ ಅಂತ ಭ್ರಮೆಯಲ್ಲಿ ಇರಬೇಡಿ ಎಂದು ಕಿಡಿಕಾರಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.