ಹುಬ್ಬಳ್ಳಿ : ರಾಜ್ಯ ಸರ್ಕಾರ ವಿಶ್ವಾಸವನ್ನು ಕಳೆದುಕೊಂಡಿದೆ, ಇವರ ವಿರುದ್ಧ ಹೋರಾಟ ನಡೆಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಯನ್ನು ಸಮರ್ಥಿಸಿ ಕೊಂಡಿದ್ದಾರೆ. ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ.ಮತ್ತೊಂದು ಕಡೆ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗುಡುಗಿದರು.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಅವರಿಗೂ ತಟ್ಟಲಿದೆಯಾ ಬಂಧ್ ಬಿಸಿ?
ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಶೆಟ್ಟರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿಯಾಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿ-ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆ ಎದುರಿಸಲು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಇದು ರಾಜ್ಯದ ಜನರ ಅಪೇಕ್ಷೆಕೂಡ; ಇದರ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಹಿಂದೆ ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು, ಆಗ ಇಬ್ಬರೂ ಅಸಹಾಯಕರಾಗಿದ್ದರೆ? ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ನೈತಿಕತೆ ಇಲ್ಲದವ್ರು, ನೈತಿಕ ಬೆಂಬಲ ನೀಡ್ತಿದ್ದಾರೆ : ರಾಮಲಿಂಗಾ ರೆಡ್ಡಿ
ರಾಜ್ಯದಲ್ಲಿ ಬರ ಘೋಷಣೆಗೆ ಸಂಬಂಸಿದಂತೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ನಮ್ಮ ಸರ್ಕಾರ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ದುಡ್ಡನ್ನು ರಾಜ್ಯದಲ್ಲಿ ಕೊಟ್ಟಿದ್ದೇವೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡೋ ಕೆಲಸ ಮಾಡ್ತಾ ಇಲ್ಲ. ನ್ಯಾಷನಲ್ ಡಿಸಾಸ್ಟರ್ ನ ಮೊದಲನೇ ಕಂತು ಈಗಾಗಲೇ ಬಂದಿದೆ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದರು.
ಇದನ್ನೂ ಓದಿ : ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಟ್ಟಿದ ಬಂದ್ ಬಿಸಿ!..
ಇನ್ನೂ ಮುಂದುವರೆದು ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇವೆ ಎಂದು, ಸುಮ್ಮನೆ ಮೀಟಿಂಗ್ ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ರೀತಿ ಆದರೆ ರಾಜ್ಯದ ಸ್ಥಿತಿ ಅಧೋಗತಿ ಹೋಗುತ್ತೆ, ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವೆಲ್ಲ ಒಂದಾಗಬೇಕಿದೆ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.