ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ‘ಗುಣ ನಿಯಂತ್ರಣ’ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಶಿವಕುಮಾರ್ ಆರೋಗ್ಯದ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ‘ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ನಾವೇಲ್ಲಾ ಭಗವಂತನಲ್ಲಿ ಪ್ರಾರ್ಥನೆ ಮಾಡ್ತೀವಿ. ಆಸ್ಪತ್ರೆಯ ವೈದ್ಯರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ‘ಆಪರೇಷನ್ ಕಾಂಗ್ರೆಸ್ ಹೆಸರಲ್ಲಿ ಶಾಸಕರನ್ನು ಬೆದರಿಸುತ್ತಿದ್ದಾರೆ’
ಈ ನಡುವೆ ಅಪೋಲೋ ಆಸ್ಪತ್ರೆಯ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಶಿವಕುಮಾರ್ ಕುಟುಂಬಸ್ಥರು ಆಸ್ಪತ್ರೆ ಬಳಿ ದೌಡಾಯಿಸಿದ್ದಾರೆ. ಜೊತೆಗೆ ಬಿಬಿಎಂಪಿ ಸಿಬ್ಬಂದಿಯೂ ಸಹ ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.