Sunday, October 1, 2023
spot_img
- Advertisement -spot_img

ಬೆಂಗಳೂರಿನಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡಂಗಿಲ್ಲ: ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆ, ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧ ಮಾಡುವಂತೆ ಖಡಕ್‌ ಎಚ್ಚರಿಕೆ ನೀಡಲಾಗಿದ್ದು, ಈ ನಿಯಮ ಜಾರಿಯಾಗದಿದ್ದರೆ ದಂಡದ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಹೇಳಿದೆ.

ಈಗಾಗಲೇ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳು, ದೇವಾಲಯಗಳ ಆವರಣದೊಳಗೆ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಫಲಕ ಅಳವಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಏಕಬಳಕೆ ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಅಥವಾ ಕಾಗದದಿಂದ ತಯಾರಾದ ವಸ್ತುಗಳನ್ನು ಬಳಸಬೇಕು. ನಿಯಮ ಪಾಲಿಸದಿದ್ದರೆ, ದಂಡ ವಿಧಿಸಲಾಗುವುದು. ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಿ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಜಂಟಿ ನಿರ್ದೇಶಕಿ ಪ್ರತಿಭಾ ತಿಳಿಸಿದ್ದಾರೆ.

ಇದನ್ನೂ ಓದಿ: ಎಸ್‌.ಟಿ.ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಮತ್ತಷ್ಟು ಹತ್ತಿರ

ಈಗಾಗಲೇ ಹಲವು ಬಾರಿ ಪ್ಲಾಸ್ಟಿಕ್‌ ಬಳಕೆ ನಿಷೇಧದ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದ್ದರೂ, ರಾಜಾರೋಷವಾಗಿ ಪ್ಲಾಸ್ಟಿಕ್‌ ದರ್ಬಾರ್‌ ಮುಂದುವರೆಯುತ್ತಲೇ ಇದೆ. ಪರಿಸರಕ್ಕೆ ಮಾರಕವಾದ ಏಕಬಳಕೆ ಪ್ಲಾಸ್ಟಿಕ್‌ ಬೆಂಗಳೂರಿನಲ್ಲಿ ಇನ್ನಾದರೂ ನಿಷೇಧ ಆಗುತ್ತಾ ಕಾದುನೋಡಬೇಕಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles