ಬೆಂಗಳೂರು : ನಗರದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಸಂಬಂಧಪಟ್ಟಂತೆ ಯಾವುದೇ ಬಿಲ್ ಅನ್ನು ನಾವು ಬಾಕಿ ಉಳಿಸಿಕೊಂಡಿಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಆರೋಪಿ ಚೈತ್ರಾ ಕುಂದಾಪುರ, ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಹೇಳಿದ ಬೆನ್ನಲ್ಲೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪೊಲಿಟಿಕಲ್360ಗೆ ಎಕ್ಸ್‌ಕ್ಲೂಸಿವ್ ಆಗಿ ಮಾಹಿತಿ ನೀಡಿರುವ ಅವರು, ಬಿಬಿಎಂಪಿ ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಬಹುತೇಕ ಕ್ಲೀಯರ್ ಮಾಡಲಾಗಿದೆ. ಕೆಲವು ಸಣ್ಣ-ಪುಟ್ಟ ಬಿಲ್ ಬಾಕಿ ಇರಬೇಕು, ಅದನ್ನು ಹೆಲ್ತ್ ಕಮಿಷನರ್ ಗೆ ನೋಡಿಕೊಳ್ಳಲು ಹೇಳಿದ್ದೇನೆ ಎಂದರು.
ಇದನ್ನೂ ಓದಿ : ಬಂಧನಕ್ಕೂ ಮುನ್ನ ಬೀದರ್ ಗೆ ಭೇಟಿ ನೀಡಿದ್ದ ಚೈತ್ರಾ ಕುಂದಾಪುರ
ಇಂದಿರಾ ಕ್ಯಾಂಟೀನ್ ಬಿಲ್ ಅನ್ನು ಕಾನೂನಾತ್ಮಕವಾಗಿ ಪಾವತಿ ಮಾಡಲಾಗಿದೆ. ಯಾವುದೇ ರೀತಿಯ ಬಿಲ್ ಅನ್ನು ಗುತ್ತಿಗೆದಾರರಿಗೆ ನೀಡುವಲ್ಲಿ ಬಾಕಿ ಉಳಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. ನಮಗೆ ಸಿಸಿಬಿ ಅಧಿಕಾರಿಗಳು ಕ್ಯಾಂಟೀನ್ ಬಗ್ಗೆ ಯಾವುದೇ ಮಾಹಿತಿ ಕೇಳಿಲ್ಲ. ಒಂದು ವೇಳೆ ಮಾಹಿತಿ ಕೇಳಿದರೆ ಕೊಡುತ್ತೇವೆ, ಸದ್ಯ ಯಾವುದೇ ಬಿಲ್ ಬಾಕಿ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.
14.92ಕೋಟಿ ರೂ. ಅವ್ಯವಹಾರ..
ಈ ಹಿಂದೆ 2019ರ ರಾಜ್ಯ ಲೆಕ್ಕ ಪರಿಶೋಧನಾ ಆಡಿಟ್ ವರದಿಯಲ್ಲಿ ಇಂದಿರಾ ಕ್ಯಾಂಟೀನ್ ಗೋಲ್ಮಾಲ್ ಬಗ್ಗೆ ಉಲ್ಲೇಖಿಸಲಾಗಿತ್ತು. 2019-20ರ ಲೆಕ್ಕ ಪರಿಶೋಧನೆ ವರದಿಯಲ್ಲಿ 14.92 ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಮಾಹಿತಿ ಇತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಬಿಬಿಎಂಪಿ ಆಯುಕ್ತರು, ಬಳಿಕ ಪೂರಕ ದಾಖಲೆಗಳನ್ನು ಸಂಗ್ರಹಿಸಿ, ಲೆಕ್ಕ ಪರಿಶೋಧನೆ ವರದಿಯಲ್ಲಿ ಬೋಗಸ್ ಊಟ, ತಿಂಡಿಯ ಲೆಕ್ಕ ಕೊಟ್ಟಿದ್ದು ನಿಜವಾಗಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.