Friday, September 29, 2023
spot_img
- Advertisement -spot_img

ನ್ಯಾಯಾಲಯಕ್ಕೆ ಗೈರು; ಶಶಿಕಲಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಬೆಂಗಳೂರು: ನ್ಯಾಯಾಲಯದ ಕಲಾಪಕ್ಕೆ ಗೈರಾಗಿದ್ದ ಎಐಎಡಿಎಂಕೆ ಪಕ್ಷದ ಮುಖಂಡೆ ವಿ.ಕೆ. ಶಶಿಕಲಾ ನಟರಾಜನ್ ವಿರುದ್ಧ ಲೋಕಾಯುಕ್ತ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸವಲತ್ತು ಪಡೆದುಕೊಂಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಮತ್ತು ಇಳವರಸಿ ವಿರುದ್ಧ ಬೆಂಗಳೂರಿನ ವಿಶೇಷ ಲೋಕಾಯುಕ್ತ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಶಶಿಕಲಾ ಶ್ಯೂರಿಟಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ; ಹೆಚ್‌.ಡಿ.ರೇವಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡಲು ಕೋರ್ಟ್‌ ಆದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿ ಜೈಲಿನಲ್ಲಿದ್ದಾಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿ ಸೌಲಭ್ಯಗಳನ್ನು ಪಡೆಯಲು ಜೈಲು ಅಧಿಕಾರಿಗಳಿಗೆ ಲಂಚ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಅವರು ನಾಲ್ಕು ವರ್ಷಗಳ ಕಾಲ ಬೆಂಗಳೂರು ಜೈಲಿನಲ್ಲಿದ್ದರು. ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ವಿರುದ್ಧ ಇದೇ ಪ್ರಕರಣದಲ್ಲಿ ಇಳವರಸಿ ನಾಲ್ಕನೇ ಆರೋಪಿಯಾಗಿದ್ದರು.

ಜೈಲಿನೊಳಗೆ ಶಶಿಕಲಾ ಅವರಿಗೆ ಹಲವು ಐಷಾರಾಮಿ ಸೌಲಭ್ಯ ಕಲ್ಪಿಸಿಕೊಡುತ್ತಿದ್ದಾರೆ ಎಂದು ಆಗಿನ ಡಿಐಜಿ (ಕಾರಾಗೃಹ) ಡಿ. ರೂಪಾ ಅವರು ಆರೋಪಿಸಿದ್ದರು. ಆರೋಪ ಹೊರಬಿದ್ದ ನಂತರ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರ ಏಕಸದಸ್ಯ ಸಮಿತಿ ರಚಿಸಿತ್ತು.

ಇದನ್ನೂ ಓದಿ; ನಾನು ‘ಸನಾತನ’ ಧರ್ಮವನ್ನು ಗೌರವಿಸುತ್ತೇನೆ : ಮಮತಾ ಬ್ಯಾನರ್ಜಿ

ಸಮಿತಿಯು ತನ್ನ ವರದಿಯಲ್ಲಿ ಶಶಿಕಲಾ ಮತ್ತು ಇಳವರಸಿಗೆ ಜೈಲಿನೊಳಗೆ ಎಲ್ಲಿ ಬೇಕಾದರೂ ಓಡಾಡಲು ಮತ್ತು ಅನಿಯಮಿತ ಸಂಖ್ಯೆಯ ಸಂದರ್ಶಕರನ್ನು ಭೇಟಿ ಮಾಡುವ ಸ್ವಾತಂತ್ರ್ಯ ಸೇರಿದಂತೆ ಐಷಾರಾಮಿ ಜೀವನ ನಡೆಸಲು ಅವಕಾಶವಿದೆ ಎಂದು ವರದಿ ನೀಡಿದೆ.

ಈ ವರ್ಷದ ಮೇ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಮೂವರು ಜೈಲು ಅಧಿಕಾರಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತು. ಈ ಆದೇಶದ ಆಧಾರದ ಮೇಲೆ ಶಶಿಕಲಾ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles