Sunday, October 1, 2023
spot_img
- Advertisement -spot_img

‘ಮೋದಿ ಸರ್ಕಾರ ಗ್ಯಾಸ್ ದರ ಕಡಿಮೆ ಮಾಡಿದ್ದನ್ನು ಕಾಂಗ್ರೆಸ್ ಸಹಿಸುತ್ತಿಲ್ಲ’

ಬೆಂಗಳೂರು: ‘ಗ್ಯಾರಂಟಿಗಳ ಸುಳ್ಳು ಭರವಸೆ ನೀಡಿ, ಜನರನ್ನು ಮೂರ್ಖರನ್ನಾಗಿ ಮಾಡಿದ್ದಾರೆ. ನರೇಂದ್ರ ಮೋದಿ ಸರ್ಕಾರ ಎಲ್ ಪಿಜಿ ದರ ಕಡಿಮೆ ಮಾಡಿದ್ದನ್ನು ಕಾಂಗ್ರೆಸ್‌ನವರು ಸಹಿಸುತ್ತಿಲ್ಲ’ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘2019ರಲ್ಲಿ ನರೇಂದ್ರ ಮೋದಿ ಹೇಗೆ ಗೆಲ್ಲಿಸಿದ್ರೋ 2024ರಲ್ಲೂ ಹಾಗೇ ಗೆಲ್ಲಿಸಲು ಜನರು ಕಾಯ್ತಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಜನರು ಬೇಸತ್ತಿದ್ದಾರೆ. ಬೆಂಗಳೂರಿನ ಜನರು ಕಾವೇರಿ ನೀರಿನ ಬಗ್ಗೆ ಸರ್ಕಾರದ ನಡವಳಿಕೆಯಿಂದ ಬೇಸರಗೊಂಡಿದ್ದಾರೆ. ಕಾವೇರಿ ನೀರಿನ ವಸ್ತುಸ್ಥಿತಿ ಬಗ್ಗೆ ಸರ್ಕಾರ ಮನವರಿಕೆ ಮಾಡಿಕೊಟ್ಟಿಲ್ಲ, ಆದ್ದರಿಂದಲೇ ಕಾವೇರಿ ಪ್ರಾಧಿಕಾರದಲ್ಲಿ ಎರಡು ಬಾರಿ ರಾಜ್ಯಕ್ಕೆ ಸೋಲಾಗಿದೆ. ಪ್ರತಿ ದಿನ ತಮಿಳುನಾಡಿಗೆ ನೀರು ಬಿಡ್ತಿದ್ದಾರೆ, ಇದರಿಂದ ಜಲಾಶಯ ಕೂಡ ಬರಿದಾಗ್ತಿದೆ’ ಎಂದು ಹೇಳಿದರು.

ಇದನ್ನೂ ಓದಿ; ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ! ಬಿ ಎಲ್ ಸಂತೋಷ್ ಸಭೆಗೆ ಹಲವರು ಗೈರು

‘ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ತಮಿಳುನಾಡಿನಲ್ಲಿ ಎರಡೆರಡು ಬೆಳೆ ಬೆಳೆಯಲು ನೀರು ಸಿಕ್ತಿದೆ. ಆದರೆ, ಕರ್ನಾಟಕದಲ್ಲಿ ಬೆಳೆಗೆ ನೀರೇ ಇಲ್ಲ. ಸುಪ್ರೀಂಕೋರ್ಟಿನಲ್ಲೂ ಕಾವೇರಿ ನೀರಿನ ಕೊರತೆ ಬಗ್ಗೆ ವಾಸ್ತವ ಸ್ಥಿತಿ ತಿಳಿಸಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ಬೆಂಗಳೂರಿನ ಬಿಬಿಎಂಪಿ ಚುನಾವಣೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಎದುರಿಸಬೇಕಾಗಿದೆ. ಮತದಾನರರ ಪಟ್ಟಿ ಪರಿಷ್ಕರಣೆ ಅಭಿಯಾನ ಪ್ರಮುಖವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಒಂದು ಮಹತ್ವದ ಪ್ರಕ್ರಿಯೆ; ಚುನಾವಣಾ ಆಯೋಗದ ಜೊತೆ ಬಿಜೆಪಿ ಕೈ ಜೋಡಿಸಿದೆ. ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಶುರುವಾಗಿದೆ. ರಾಜ್ಯ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ ತಂಡ ಕೆಲಸ ಮಾಡುತ್ತದೆ. ಕಳೆದ ಒಂಬತ್ತು ವರ್ಷಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಂಡಿದೆ. ಕಾಂಗ್ರೆಸ್ ಪಡೆದಿರುವ ಮತಕ್ಕೂ ಬಿಜೆಪಿ ತೆಗೆದುಕೊಂಡ ಮತಕ್ಕೂ ಒಂಬತ್ತು ಲಕ್ಷ ಮತಗಳೇ ಅಂತರ ಇರೋದು’ ಎಂದು ತೇಜಸ್ವಿ ಸೂರ್ಯ ವಿವರಿಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles