ನಾಗ್ಪುರ: ಶ್ರೀರಾಮಚಂದ್ರ ದೇಶದ ಇತಿಹಾಸ, ಪರಂಪರೆಯನ್ನು ಪ್ರತಿನಿಧಿಸುತ್ತಾನೆ ಮತ್ತು ಸಂಸ್ಕೃತಿಯ ಸಂಕೇತವಾಗಿದ್ದಾನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇದು ನಮ್ಮ ಜೀವನದ ದೊಡ್ಡ ಸಾಧನೆಯಾಗಿದೆ, ಇದರ ಇತಿಹಾಸವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನೇ ಅಯೋಧ್ಯೆಯಲ್ಲಿ ರಾಮಮಂದಿರ ಚಳವಳಿಯಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದೆ. ಅನೇಕ ಜನರು ಸತ್ಯಾಗ್ರಹ ಮಾಡಿದರು. ಭಗವಾನ್ ರಾಮನನ್ನು ಅವನ ಜನ್ಮಸ್ಥಳದಲ್ಲಿ ಸ್ಥಾಪಿಸ ಲಾಗುವುದು. ಇದಕ್ಕಿಂತ ಭಾರತೀಯರಿಗೆ ಸಂತಸದ ಸಂಗತಿ ಏನಿದೆ ? ಎಂದು ಪ್ರಶ್ನಿಸಿದ್ದಾರೆ.
ರಾಮಮಂದಿರ ಕೇಂದ್ರ ಸ್ಥಾನವನ್ನು ಪಡೆದುಕೊಂಡಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಕಾಂಗ್ರೆಸ್ ನಿಲ್ಲಿಸಿದೆ ಎಂದು ಪ್ರಧಾನಿ ಮೋದಿಯಿಂದ ಹಿಡಿದು ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹೇಳಿಕೆ; ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ
ಭಾರತೀಯರು ಅಂದ್ರೆ ಕೇವಲ ಹಿಂದೂಗಳಲ್ಲ, ಆದರೆ ಅವರ ಧರ್ಮವನ್ನು ಲೆಕ್ಕಿಸದೆ ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದಲ್ಲಿ ನಂಬಿಕೆಯಿರುವ ಎಲ್ಲ ಜನರನ್ನು ಒಳಗೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.
ಅಂದಹಾಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅಕ್ಟೋಬರ್ 25 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಜನವರಿ 22, 2024 ರಂದು ಸ್ಥಾಪಿಸಲಾಗುವುದು ಎಂದು ಹೇಳಿದ್ದರು. ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವಾಲಯದ ಶಂಕುಸ್ಥಾಪನೆಗೆ ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದರು.
ಅಯೋಧ್ಯೆಯ ಭವ್ಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದ ಆಹ್ವಾನವನ್ನು ಸ್ವೀಕರಿಸಿದ ನಂತರ, ಪ್ರಧಾನಿ ಮೋದಿ ಇಂತಹ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.