ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ‘ಭಾರತ್ ಜೋಡೋ ಯಾತ್ರೆ’ಗೆ ಇಂದು ಒಂದು ವರ್ಷ ಪೂರ್ಣಗೊಂಡಿದೆ. ಹೀಗಾಗಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಡಿಯಲ್ಲಿ ಪಾದಯಾತ್ರೆ ಮತ್ತು ಸಾರ್ವಜನಿಕ ಸಭೆಗಳ ನಡೆಸಲು ನಿರ್ಧರಿಸಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಲಾಗಿತ್ತು. 136 ದಿನಗಳ, 4,000 ಕಿಮೀ ಪ್ರಯಾಣವನ್ನು ಪ್ರಾರಂಭಿಸಿಲಾಗಿತ್ತು. ಯಾತ್ರೆಯ ಕೇಂದ್ರ ಸಂದೇಶವನ್ನು ಮರುಸೃಷ್ಟಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು, ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ‘ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಮಾಡಿದ್ದೇ ಸನಾತನ ಧರ್ಮ’
ದೇಶಾದ್ಯಂತ 722 ಸ್ಥಳಗಳಲ್ಲಿ ಪಾದಯಾತ್ರೆಗಳನ್ನು ಆಯೋಜಿಸಲು ಪಕ್ಷವು ಯೋಜಿಸಿದೆ. ಪ್ರತಿ ಜಿಲ್ಲೆಯಲ್ಲೂ ಒಂದು ಗಂಟೆಗಳ ಕಾಲ ಪಾದಯಾತ್ರೆ ನಡೆಸಲು ಸೂಚಿಸಲಾಗಿದೆ. ಆದರೆ ಯಾತ್ರೆಯ ವಾರ್ಷಿಕೋತ್ಸವ ಆಚರಣೆ ವೇಳೆ ನಾಯಕ ರಾಹುಲ್ ಗಾಂಧಿ ಗೈರಾಗಲಿದ್ದಾರೆ. ಪ್ರಸ್ತುತ ಅವರು ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್‌ನಲ್ಲಿದ್ದು, ಇಂದು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಹೀಗಾಗಿ ಭಾರತ್ ಜೋಡೋ ಯಾತ್ರೆ ವಾರ್ಷಿಕೋತ್ಸವದಿಂದ ದೂರ ಉಳಿಯಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.